ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಜಿಲ್ಲಾ ಮುಸ್ಲಿಂ ಜಮಾಅತ್ ನಿಂದ ವಕ್ಫ್ ಬೋರ್ಡ್ ನೂತನ ಅಧ್ಯಕ್ಷರಿಗೆ ಸ್ವಾಗತ

ಉಡುಪಿ: ಕರ್ನಾಟಕ ರಾಜ್ಯ ವಕ್ಫ್ ಬೋರ್ಡ್ ನ ನೂತನ ಅಧ್ಯಕ್ಷರಾದ ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಪ್ರಧಾನ ಕಾರ್ಯದರ್ಶಿ ಸನ್ಮಾನ್ಯ ಎನ್ ಕೆ ಮುಹಮ್ಮದ್ ಶಾಫಿ ಸಅದಿ ಅವರಿಗೆ ಕರ್ನಾಟಕ ಮುಸ್ಲಿಂ ಜಮಾಅತ್ ಉಡುಪಿ ಜಿಲ್ಲಾ ಸಮಿತಿಯ ವತಿಯಿಂದ ಬಜ್ಪೆ ವಿಮಾನ ನಿಲ್ದಾಣದಲ್ಲಿ ಏಲಕ್ಕಿ ಹಾರ ಹಾಗೂ ಹೂ ಗುಚ್ಛ ನೀಡಿ ಭವ್ಯ ಸ್ವಾಗತ ಕೋರಲಾಯಿತು.

ಮುಸ್ಲಿಂ ಜಮಾಅತ್ ಜಿಲ್ಲಾಧ್ಯಕ್ಷ ಬಿ ಎಸ್ ಎಫ್ ರಫೀಕ್ ಗಂಗೊಳ್ಳಿ, ಮುಸ್ಲಿಂ ಜಮಾಅತ್ ರಾಜ್ಯ ಸದಸ್ಯರಾದ ಹಾಜಿ ಪಿ ಅಬೂಬಕ್ಕರ್ ನೇಜಾರು, ಕೆ ಎ ಅಬ್ದುರ್ರಹ್ಮಾನ್ ರಝ್ವಿ ಕಲ್ಕಟ್ಟ, ಮುಸ್ಲಿಂ ಜಮಾಅತ್ ಜಿಲ್ಲಾ ನಾಯಕರಾದ ಸಯ್ಯದ್ ಫರೀದ್ ಉಡುಪಿ, ಹಾಜಿ ಕೆ ಪಿ ಇಬ್ರಾಹಿಂ ಮಟಪಾಡಿ, ಹಾಜಿ ಮೊಯ್ದಿನ್ ಗುಡ್ವಿಲ್, ಹೆಚ್ ಸುಬ್ಹಾನ್ ಅಹ್ಮದ್ ಹೊನ್ನಾಳ, ಶೇಖ್ ಮುಹಮ್ಮದ್ ನಯೀಮ್ ಕಟಪಾಡಿ, ಅಡ್ವಕೆಟ್ ಇಲ್ಯಾಸ್ ನಾವುಂದ ವೈ ಎಮ್ ಇಲ್ಯಾಸ್ ಕಟಪಾಡಿ ಹಾಗೂ ಮತ್ತಿತರ ನಾಯಕರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

23/11/2021 04:58 pm

Cinque Terre

938

Cinque Terre

0

ಸಂಬಂಧಿತ ಸುದ್ದಿ