ಉಡುಪಿ: ಉಡುಪಿ ಕೃಷ್ಣಾಪುರ ಮಠದ ಪರ್ಯಾಯೋತ್ಸವಕ್ಕೆ ಕಾಶಿ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಶ್ರೀಪಾದರನ್ನು ಆಹ್ವಾನಿಸಲು ಪರ್ಯಾಯೋತ್ಸವ ಸಮಿತಿ ಗೌರವ ಕಾರ್ಯಧ್ಯಕ್ಷರು, ಶಾಸಕರಾದ ಕೆ. ರಘುಪತಿ ಭಟ್ ರವರು ಪರ್ಯಾಯೋತ್ಸವ ಸಮಿತಿ ಸದಸ್ಯರೊಂದಿಗೆ ಕೋಟ ಶ್ರೀ ಕಾಶಿ ಮಠ ಶ್ರೀ ಮುರಳೀಧರ ಕೃಷ್ಣ ಮುಖ್ಯಪ್ರಾಣ ದೇವಸ್ಥಾನದಲ್ಲಿ ಶ್ರೀಮದ್ ಸಂಯಮಿಂದ್ರ ತೀರ್ಥ ಶ್ರೀಪಾದರನ್ನು ಭೇಟಿಯಾಗಿ ಆಶೀರ್ವಾದ ಪಡೆದು ಆಹ್ವಾನ ಪತ್ರಿಕೆ ನೀಡಿ ಉಡುಪಿ ಪರ್ಯಾಯೋತ್ಸವಕ್ಕೆ ಆಹ್ವಾನಿಸಿದರು.
ಈ ಸಂದರ್ಭದಲ್ಲಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಘವೇಂದ್ರ ಕಿಣಿ, ಪರ್ಯಾಯೋತ್ಸವ ಸಮಿತಿ ಗೌರವ ಅಧ್ಯಕ್ಷ ಶ್ರೀ ಕೆ. ಸೂರ್ಯ ನಾರಾಯಣ ಉಪಾಧ್ಯಾಯ, ಕೃಷ್ಣ ಮಠದ ವ್ಯವಸ್ಥಾಪಕರಾದ ಗೋವಿಂದರಾಜ್, ಪಿ.ಆರ್.ಓ ಶ್ರೀಶ ಭಟ್, ಶ್ರೀ ರಾಜ ತಂತ್ರಿ ಉಪಸ್ಥಿತರಿದ್ದರು.
Kshetra Samachara
01/12/2021 12:46 pm