ಉಡುಪಿ: ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಶ್ರೇಷ್ಠ ಪ್ರಾಚೀನ ಸಂಸ್ಕೃತಿಯನ್ನು ಮರುಸ್ಥಾಪಿಸುವ ಕನಸು ಕಂಡವರು. ಈ ನಿಟ್ಟಿನಲ್ಲಿ ಕಾಶಿ ವಿಶ್ವನಾಥ ಧಾಮದ ಅಭಿವೃದ್ಧಿ ಮತ್ತು ಸುಂದರೀಕರಣದ ಅದ್ಭುತ ಕೆಲಸಗಳು ನಡೆದಿದ್ದು, ಈ ನವೀಕೃತ ಧಾರ್ಮಿಕ ನಗರವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಡಿಸೆಂಬರ್ 13ರಂದು ಉದ್ಘಾಟಿಸಲಿದ್ದಾರೆ.
ದೇಶದಾದ್ಯಂತ ಸುಮಾರು 51,000 ಸ್ಥಳಗಳಲ್ಲಿ ಬೃಹತ್ ಪ್ರಮಾಣದ ಎಲ್‌ಇಡಿ ಪರದೆಗಳನ್ನು ಸ್ಥಾಪಿಸಲಾಗಿದ್ದು, ಅದರಲ್ಲಿ ಭವ್ಯ ಕಾಶೀ ದಿವ್ಯ ಕಾಶೀ ಕಾರ್ಯಕ್ರಮದ ನೇರ ಪ್ರಸಾರದ ವೀಕ್ಷಣೆ ನಡೆಯಲಿದೆ. ರಾಜ್ಯ ಬಿಜೆಪಿ ಸೂಚನೆಯಂತೆ ಡಿ.13ರಂದು ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಮಂಡಲಗಳು ಮತ್ತು ಮಹಾ ಶಕ್ತಿಕೇಂದ್ರಗಳ ಪ್ರಮುಖ ಧಾರ್ಮಿಕ ಸ್ಥಳಗಳಲ್ಲಿ ಭವ್ಯ ಕಾಶೀ ದಿವ್ಯ ಕಾಶೀ ಕಾರ್ಯಕ್ರಮದ ನೇರ ಪ್ರಸಾರವನ್ನು ವೀಕ್ಷಿಸಲು ಕಾರ್ಯಕ್ರಮ ಆಯೋಜಿಸುವ ನಿಟ್ಟಿನಲ್ಲಿ ಸಿದ್ಧತೆಗಳು ನಡೆಯುತ್ತಿವೆ ಎಂದು ಭವ್ಯ ಕಾಶೀ ದಿವ್ಯ ಕಾಶೀ ಅಭಿಯಾನದ ಜಿಲ್ಲಾ ಸಂಚಾಲಕ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬೈಕಾಡಿ ಸುಪ್ರಸಾದ್ ಶೆಟ್ಟಿ ಹೇಳಿದರು.
ಅವರು ಭವ್ಯ ಕಾಶೀ ದಿವ್ಯ ಕಾಶೀ ಅಭಿಯಾನದ ಪೂರ್ವಭಾವಿಯಾಗಿ ಡಿ.11ರಂದು ಉಡುಪಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ರವರ ಸೂಚನೆಯಂತೆ ದೇಶದಾದ್ಯಂತ ಡಿ.13 ರಿಂದ ಜ.14ರ ವರೆಗೆ ಒಂದು ತಿಂಗಳ ಕಾಲ ವಿವಿಧ ಕಾರ್ಯಕ್ರಮಗಳು ನಡೆಯಲಿವೆ.
ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ನಡೆಯಲಿರುವ ಭವ್ಯ ಕಾಶೀ ದಿವ್ಯ ಕಾಶೀ ಅಭಿಯಾನದ ಪೂರ್ವ ಸಿದ್ಧತೆಗಳ ಬಗ್ಗೆ ಜಿಲ್ಲಾ ಮತ್ತು ಮಂಡಲಗಳ ಸಂಚಾಲಕರು ಹಾಗೂ ಸಹ ಸಂಚಾಲಕರನ್ನು ನೇಮೀಸಲಾಗಿದೆ.
ಡಿ.13ರಂದು ಜಿಲ್ಲೆಯ ಉಡುಪಿ ನಗರ, ಉಡುಪಿ ಗ್ರಾಮಾಂತರ, ಕಾಪು, ಕಾರ್ಕಳ, ಕುಂದಾಪುರ ಮತ್ತು ಬೈಂದೂರು ಮಂಡಲಗಳ ಮತ್ತು ಮಹಾ ಶಕ್ತಿ ಕೇಂದ್ರಗಳ ಪ್ರಮುಖ ದೇವಸ್ಥಾನಗಳಲ್ಲಿ ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 12.30ರ ವರೆಗೆ ಭವ್ಯ ಕಾಶೀ ದಿವ್ಯ ಕಾಶೀ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಣೆ ನಡೆಯಲಿದೆ.
Kshetra Samachara
11/12/2021 09:00 pm