ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ:ರಾಷ್ಟ್ರೀಯ ಪ್ಯಾರಾ ಸಿಟ್ಟಿಂಗ್ ವಾಲಿಬಾಲ್ ಚಾಂಪಿಯನ್‌ ಷಿಪ್ ಉದ್ಘಾಟನೆ

ಉಡುಪಿ: ಪ್ಯಾರಾಲಿಂಪಿಕ್ ವಾಲಿಬಾಲ್ ಫೆಡರೇಷನ್ ಆಫ್ ಇಂಡಿಯಾ, ಉಡುಪಿ ಜಿಲ್ಲಾಡಳಿತ, ಜಿಪಂ, ಲಯನ್ಸ್ ಕ್ಲಬ್ ಡಿಸ್ಟ್ರಿಕ್ಟ್ 317ಸಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವುಗಳ ಸಂಯುಕ್ತ ಆಶ್ರಯದಲ್ಲಿ 10ನೇ ರಾಷ್ಟ್ರೀಯ ಪುರುಷರ ಮತ್ತು ಮಹಿಳೆಯರ ಪ್ಯಾರಾ ಸಿಟ್ಟಿಂಗ್ ವಾಲಿಬಾಲ್ ಚಾಂಪಿಯನ್‌ ಷಿಪ್ ನಗರದ ಅಜ್ಜರಕಾಡಿನಲ್ಲಿರುವ ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಉದ್ಘಾಟನೆಗೊಂಡಿತು.

ನಾಲ್ಕು ದಿನಗಳ ಕಾಲ ನಡೆಯುವ ಟೂರ್ನಿಯಲ್ಲಿ ದೇಶದ ಒಟ್ಟು 10 ಪುರುಷರ- ಆತಿಥೇಯ ಕರ್ನಾಟಕ, ರಾಜಾಸ್ಥಾನ, ಆಂಧ್ರ ಪ್ರದೇಶ, ತೆಲಂಗಾಣ, ತುಮಿಳುನಾಡು, ಉತ್ತರಾಖಂಡ, ಬಿಹಾರ, ಹರ್ಯಾಣ, ಪಾಂಡಿಚೇರಿ ಹಾಗೂ ಪಶ್ಚಿಮ ಬಂಗಾಳ- ಹಾಗೂ ಐದು ಮಹಿಳಾ ತಂಡಗಳು ಭಾಗವಹಿಸಿವೆ.

ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಕೆ.ಪಿ.ಪುರುಷೋತ್ತಮ್ ಕ್ರೀಡಾ ಕೂಟವನ್ನು ಉದ್ಘಾಟಿಸಿ, ಅಧಿಕೃತ ಚಾಲನೆ ನೀಡಿದರು. ಮುಖ್ಯ ಅತಿಥಿಗಳಾಗಿ ಕರಾವಳಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ನಗರ ಸಭಾ ಅಧ್ಯಕ್ಷೆ ಸುಮಿತ್ರಾ ನಾಯಕ್, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ ಭಾಗವಹಿಸಿದ್ದರು.

Edited By : PublicNext Desk
Kshetra Samachara

Kshetra Samachara

17/12/2021 03:31 pm

Cinque Terre

1.26 K

Cinque Terre

0

ಸಂಬಂಧಿತ ಸುದ್ದಿ