ಉಡುಪಿ: ಆಶಾ ಕಾರ್ಯಕರ್ತೆಯರ ಹಲವು ಸಮಸ್ಯೆಗಳ ಕುರಿತು ಜಿಲ್ಲಾ ಮಟ್ಟದ ಸಮಾವೇಶವನ್ನು AIUTUC ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಇಂದು ನಗರದ ನಾರಾಯಣ ಗುರು ಸಭಾ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಸಮಾವೇಶದ ಉದ್ಘಾಟನೆಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ನಾಗಭೂಷಣ್ ಉಡುಪ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ ಶರ್ಮಿಳಾ,ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ AIUTUC ಯ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಮತಿ ಡಿ.ನಾಗಲಕ್ಷ್ಮಿ , AIUTUC ರಾಜ್ಯ ಉಪಾಧ್ಯಕ್ಷರಾದ ಕೆ ವಿ.ಭಟ್ ರವರು ನೆರವೇರಿಸಿದರು.
AIUTUC ರಾಜ್ಯ ಉಪಾಧ್ಯಕ್ಷರಾದ ಕೆ ವಿ.ಭಟ್ ಅವರು ದೇಶದ ಆರ್ಥಿಕ ಹಾಗೂ ಸಾಮಾಜಿಕ, ರಾಜಕೀಯ ಪರಿಸ್ಥಿತಿಯ ಬಗ್ಗೆ ಮಾತನಾಡುತ್ತಾ, ಕಾರ್ಮಿಕರ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಸಂಘಟಿತ ಹೋರಾಟ ಅಗತ್ಯ. ಅದಕ್ಕಾಗಿ ಎಲ್ಲ ಆಶಾ ಕಾರ್ಯಕರ್ತೆಯರು ಒಗ್ಗಟ್ಟನ್ನು ಬಲಪಡಿಸಿಕೊಂಡು ಪ್ರಭಲ ಹೋರಾಟಕ್ಕೆ ಮುಂದಾಗುವಂತೆ ಕರೆ ನೀಡಿದರು.
ಜಿಲ್ಲೆಯ ಆಶಾ ಕಾರ್ಯಕರ್ತೆಯರ ಸಮಸ್ಯೆಗಳ ಬಗ್ಗೆ DHO ಅವರಿಗೆ ಮನವಿ ಸಲ್ಲಿಸಲಾಯಿತು. ಜಿಲ್ಲೆಯ ಎಲ್ಲಾ ಸಮಸ್ಯೆಗಳ ಬಗ್ಗೆ ಕೂಡಲೇ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ DHO ನೀಡಿದರು.
Kshetra Samachara
17/12/2021 06:01 pm