ಉಡುಪಿ: ಮದ್ಯ ವ್ಯಸನಿಗಳ ಮಕ್ಕಳ ಜಾಗೃತಿ ಸಪ್ತಾಹದ ಉದ್ಘಾಟನೆಯು ಬಡಗುಬೆಟ್ಟು ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಯ
ಜಗನ್ನಾಥ ಸಭಾಭವನದಲ್ಲಿ ನಡೆಯಿತು.
ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಶರ್ಮಿಳಾ ಎಸ್.ಕಾರ್ಯಕ್ರಮ ಉದ್ಘಾಟಿಸಿದರು.ಡಾ. ಎ. ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ, ರೋಟರಿ ಕ್ಲಬ್ ಮಣಿಪಾಲ, ರೋಟರಾಕ್ಸ್ ಕ್ಲಬ್ ಆಫ್ ಮಣಿಪಾಲ,ಐ, ಎಂ. ಎ. ಉಡುಪಿ-ಕರಾವಳಿ, ಸಂಸ್ಕೃತಿ ವಿಶ್ವ ಪ್ರತಿಷ್ಠಾನ, ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ & ವಕೀಲರ ಸಂಘ, ಬಡಗುಬೆಟ್ಟು ಕ್ರೆಡಿಟ್ ಕೋಆಪರೇಟಿವ್ ಸೊಸೈಟಿ ಸಹಯೋಗದಲ್ಲಿ ಕಾರ್ಯಕ್ರಮ ನಡೆಯುತ್ತಿದೆ.
ಇಂದಿನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎ. ವಿ. ಬಾಳಿಗಾ ಸ್ಮಾರಕ ಸಮೂಹ ಸಂಸ್ಥೆಗಳ ನಿರ್ದೇಶಕ ಡಾ. ಪಿ ವಿ ಭಂಡಾರಿ ವಹಿಸಿದ್ದರು.ಅಂತಾರಾಷ್ಟ್ರೀಯ ಖ್ಯಾತಿಯ ಜಾದೂಗಾರ ಪ್ರೊ.ಶಂಕರ್,ಐ. ಎಂ. ಎ. ಉಡುಪಿ ಕರಾವಳಿ ಅಧ್ಯಕ್ಷ ಡಾ. ವಿನಾಯಕ್ ಶೆಣೈ,
ಸಂಸ್ಕೃತಿ ವಿಶ್ವ ಪ್ರತಿಷ್ಠಾನ, ಉಡುಪಿ ಗೌರವಾಧ್ಯಕ್ಷ ವಿಶ್ವನಾಥ ಶೆಣೈ, ಜಯಕರ್ ಶೆಟ್ಟಿ ಇಂದ್ರಾಳಿ, ಡಾ.ವಿರೂಪಾಕ್ಷ ದೇವರಮನೆ ಮತ್ತಿತರರು ಉಪಸ್ಥಿತರಿದ್ದರು. ಮದ್ಯ ವ್ಯಸನಿಗಳ ಮಕ್ಕಳ ಜಾಗೃತಿ ಸಪ್ತಾಹದ ಅಂಗವಾಗಿ ವಾರ ಕಾಲ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
Kshetra Samachara
13/02/2022 05:17 pm