ಉಚ್ಚಿಲ: ಇಲ್ಲಿನ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಪುನರ್ ಪ್ರತಿಷ್ಠೆ, ರಥೋತ್ಸವ, ಬ್ರಹ್ಮಕಲಶೋತ್ಸವ, ನಾಗಮಂಡಲೋತ್ಸವ ಮುಂತಾದ ಧಾರ್ಮಿಕ ಕಾರ್ಯಕ್ರಮಗಳ ಸಲುವಾಗಿ ಎಪ್ರಿಲ್ 1ರಿಂದ ಎಪ್ರಿಲ್ 15 ರವರೆಗೆ ಸುಮಾರು 2 ರಿಂದ 3ಲಕ್ಷ ಭಕ್ತಾಧಿಗಳಿಗಾಗಿ ನಡೆಯುವ ನಿತ್ಯ ಅನ್ನದಾಸೋಹಕ್ಕೆ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವತಿಯಿಂದ ವೈಭವದ ಶೋಭಾಯಾತ್ರೆಯೊಂದಿಗೆ ಪ್ರಸಾದ ರೂಪದ ಹೊರೆಕಾಣಿಕೆಯು ಸಮರ್ಪಣೆಗೊಂಡಿತು.
ಬ್ರಹ್ಮಕಲಶೋತ್ಸವ ಸಮಿತಿ ಹಾಗೂ ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ನಾಡೋಜ ಡಾ.ಜಿ ಶಂಕರ್, ದ.ಕ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ ಕೋಟ್ಯಾನ್, ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ವಾಸುದೇವ ಸಾಲ್ಯಾನ್, ಜೀರ್ಣೋದ್ಧಾರ ಸಮಿತಿಯ ಕೋಶಾಧಿಕಾರಿ ವಿನಯ ಕರ್ಕೆರ ಉಪಸ್ಥಿತರಿದ್ದು ಗೌರವಪೂರ್ವಕವಾಗಿ ಬರಮಾಡಿಕೊಂಡರು.
Kshetra Samachara
31/03/2022 06:26 pm