ಕೋಟ :ಡಾ. ಕಾರಂತ ಪ್ರತಿಷ್ಠಾನ ಕೋಟ, ಹಾಗೂ ಡಾ. ಕಾರಂತ ಟ್ರಸ್ಟ್ ಉಡುಪಿ, ಕೋಟತಟ್ಟು ಗ್ರಾಮ ಪಂಚಾಯತ್ ವತಿಯಿಂದ ಕೊಡಮಾಡುವ ಕರಾವಳಿ ಕಣ್ಮಣಿ ದಿವಂಗತ ಕೆ.ಸಿ ಕುಂದರ್ ಸ್ಮಾರಕ ದತ್ತಿ ಪುರಸ್ಕಾರಕ್ಕೆ ಯುವ ಉದ್ಯಮಿ ಹಾಗೂ ಸಮಾಜ ಸೇವಕ ಗೋವಿಂದ ಬಾಬು ಪೂಜಾರಿ ಆಯ್ಕೆಯಾಗಿದ್ದಾರೆ.
ಜೀವನದಲ್ಲಿ ಅನೇಕ ಏಳು-ಬೀಳುಗಳನ್ನು ಅನುಭವಿಸಿ ಉತ್ತಮ ಉದ್ಯಮಿಯಾಗಿ ಸಾವಿರಾರು ಜನರ ಆಶಾಕಿರಣವಾಗಿದ್ದಾರೆ. ಅಷ್ಟೇ ಅಲ್ಲದೆ ಶ್ರೀ ವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ ಮುಖಾಂತರ ಅಶಕ್ತರ ಪಾಲಿಗೆ ಸಹಕಾರ ನೀಡುತ್ತಾ ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಹೆಸರುವಾಸಿಯಾಗಿದ್ದಾರೆ.
ಇದೆ ಬರುವ ಏಪ್ರಿಲ್ 24 ರಂದು ಕೋಟ ಥೀಮ್ ಪಾರ್ಕ್ ನಲ್ಲಿ ನಡೆಯುವ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಕಾರಂತ ಪ್ರತಿಷ್ಟಾನ ಕಾರ್ಯಧ್ಯಕ್ಷ ಆನಂದ್ ಸಿ ಕುಂದರ್, ಕನ್ನಡ ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಅಶ್ವಿನಿ ದಿನೇಶ್, ಪ್ರತಿಷ್ಟಾನ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Kshetra Samachara
13/04/2022 03:08 pm