ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೈಂದೂರಿನಲ್ಲಿ 131ನೇ ಅಂಬೇಡ್ಕರ್ ಜನ್ಮದಿನಾಚರಣೆ

ಬೈಂದೂರು:ಕಾರ್ಕಡ ನೂತನ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿಯ ವಸಂತೋತ್ಸವ ಅಂಗವಾಗಿ ಡಾ. ಬಿ. ಆರ್. ಅಂಬೇಡ್ಕರ್ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಶಾಲಾ ರಂಗಮಂಟಪದಲ್ಲಿ ಆಯೋಜಿಸಲಾಗಿತ್ತು.ಡಾ. ಬಿ.ಆರ್ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಇದೆ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಪಾಂಡೇಶ್ವರ ವಲಯ ಮತ್ತು ಎಲ್. ಐ. ಸಿ ಸಹಭಾಗಿತ್ವದಲ್ಲಿ ಶುದ್ಧ ನೀರಿನ ಘಟಕವನ್ನು ಕೊಡುಗೆಯಾಗಿ ನೀಡಲಾಯಿತು. ಸಭೆಯ ಅಧ್ಯಕ್ಷ ಸ್ಥಾನವನ್ನು ಶಾಲಾ ಮುಖ್ಯ ಶಿಕ್ಷಕ ಪ್ರಭಾಕರ ಕಾಮತ್ ವಹಿಸಿದ್ದರು. ಸಾಲಿಗ್ರಾಮ ಪಟ್ಟಣ ಪಂಚಾಯತ್ ಸದಸ್ಯೆ ಗಿರಿಜಾ ಪೂಜಾರಿ ಹಸ್ತ ಲಿಖಿತ ಪುಸ್ತಕವನ್ನು ಇದೆ ಸಂದರ್ಭದಲ್ಲಿ ಅನಾವರಣಗೊಳಿಸಲಾಯಿತು.

ಮುಖ್ಯ ಅತಿಥಿಯಾಗಿ ಉದ್ಯಮಿ ಎಮ್. ಸಿ. ಚಂದ್ರಶೇಖರ್, ಎಲ್.ಐ.ಸಿ ಜೀವವಿಮಾ ಉಡುಪಿ ಜಿಲ್ಲಾ ಪ್ರಬಂಧಕ ರವೀಂದ್ರ, ಜಿಲ್ಲಾ ವಿಮಾ ನಿಗಮದ ಸಮನ್ವಯ ಅಧಿಕಾರಿ ರಮೇಶ್ ಇನ್ನಿತರರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

15/04/2022 08:02 am

Cinque Terre

490

Cinque Terre

0

ಸಂಬಂಧಿತ ಸುದ್ದಿ