ಕುಂದಾಪುರ: ಉಡುಪಿ ಜಿಲ್ಲಾ ಯಕ್ಷಗಾನ ಕಲಾರಂಗವು ಯಕ್ಷಗಾನ ಸಂಘಟನೆ ಕಲಾವಿದರನ್ನು ಗೌರವಿಸುವ ಉದ್ದೇಶದಿಂದ ಪ್ರತಿ ವರ್ಷ ಇಪತ್ತು ಪ್ರಶಸ್ತಿಗಳನ್ನು ಪ್ರದಾನ ಮಾಡುತ್ತಾ ಬಂದಿದೆ. ಈ ವರ್ಷದ ಯಕ್ಷಗಾನ ವಿದ್ವಾಂಸರಿಗೆ ನೀಡುವ ತಲ್ಲೂರು ಕನಕಾ ಅಣ್ಣಯ್ಯ ಶೆಟ್ಟಿ ನೆನಪಿನ ಯಕ್ಷಗಾನ ಪ್ರಶಸ್ತಿಗೆ ಯಕ್ಷಗಾನ ಕಲಾವಿದ ಅರ್ಥಧಾರಿ, ಪ್ರಸಂಗಕರ್ತ, ಲೇಖಕ, ಪತ್ರಿಕಾ ಸಂಪಾದಕ ಬಹು ಆಯಾಮಗಳಲ್ಲಿ ಸಾಧನೆ ಮಾಡಿದ ತಾರಾನಾಥ ವರ್ಕಾಡಿಯವರನ್ನ ಸಂಸ್ಥೆ ಆಯ್ಕೆ ಮಾಡಿದ್ದು, ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಮೇ 22 ಭಾನುವಾರ ಉಡುಪಿ ಶ್ರೀ ಕೃಷ್ಣ ಮಠದ ರಜಾಂಗಣ ಕಲಾ ಕಾರ್ಯಕ್ರಮದಲ್ಲಿ ನಡೆಯಲಿದೆ. ಡಾ. ತಲ್ಲೂರು ಶಿವರಾಮ ಶೆಟ್ಟರ ನೇತೃತ್ವದ ತಲ್ಲೂರು ಪ್ಯಾಮಿಲಿ ಟ್ರಸ್ಟ್ ಪ್ರಾಯೋಜಕತ್ವದ ಈ ಪ್ರಶಸ್ತಿಯು 40,000 ನಗದು ಪುರಸ್ಕಾರ ಒಳಗೊಂಡಿದೆ ಎಂದು ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ್ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Kshetra Samachara
26/04/2022 01:33 pm