ಕಾಪು: ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಸುರೇಶ್ ಎರ್ಮಾಳ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕಾಪು ಪತ್ರಕರ್ತರ ಸಂಘದಲ್ಲಿ ನಡೆದ ಮಹಾಸಭೆಯಲ್ಲಿ ಜಿಲ್ಲಾ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಘೋಷಣೆ ಮಾಡಿದ್ದಾರೆ.
ಕಾರ್ಯದರ್ಶಿಯಾಗಿ ಪುಂಡಲೀಕ ಮರಾಠೆ, ಉಪಾಧ್ಯಕ್ಷರಾಗಿ ಹರೀಶ್ ಕಟಪಾಡಿ, ಕೋಶಾಧಿಕಾರಿಯಾಗಿ ಹಮೀದ್ ಪಡುಬಿದ್ರಿ, ಜೊತೆ ಕಾರ್ಯದರ್ಶಿಯಾಗಿ ವಿಜಯ ಆಚಾರ್ಯ ಉಚ್ಚಿಲ, ಕ್ರೀಡಾ ಕಾರ್ಯದರ್ಶಿಯಾಗಿ ಸಂತೋಷ್ ಕಾಪು ಆಯ್ಕೆಯಾಗಿದ್ದಾರೆ.
Kshetra Samachara
26/04/2022 04:50 pm