ಉಡುಪಿ: ಮಣಿಪಾಲದ ಜಿಲ್ಲಾಧಿಕಾರಿ ಕಛೇರಿ ರಜತಾದ್ರಿಯಲ್ಲಿ ಇವತ್ತು ಜಿಲ್ಲಾಡಳಿತ ವತಿಯಿಂದ ಬಸವಣ್ಣ ಜಯಂತಿ ಆಚರಣೆ ನಡೆಯಿತು.ಬಸವೇಶ್ವರರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಮತ್ತಿತರ ಗಣ್ಯರು ಪುಷ್ಪಾರ್ಚನೆ ಮಾಡಿದರು.
ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ಹಾಲ್ ನಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.ಕಾರ್ಯಕ್ರಮದಲ್ಲಿ ನಾಡೋಜ ಕೆ.ಪಿ.ರಾವ್ ಅವರಿಂದ ಬಸವಣ್ಣನವರ ಕುರಿತು ಉಪನ್ಯಾಸ ನಡೆಯಿತು. ಕಾರ್ಯಕ್ರಮದಲ್ಲಿ ಕರಾವಳಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹಗ್ಡೆ, ಅಪರ ಜಿಲ್ಲಾಧಿಕಾರಿ ವೀಣಾ ಉಡುಪಿ ತಹಸೀಲ್ದಾರ್ ಅರ್ಚನಾ ಭಟ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
03/05/2022 05:09 pm