ಉಡುಪಿ: ದಿ ಬುದ್ಧಿಸ್ಟ್ ಸೊಸೈಟಿ ಆಫ್ ಇಂಡಿಯಾ ವತಿಯಿಂದ ಆದಿ ಉಡುಪಿಯ ಡಾll. ಬಿ.ಆರ್ ಅಂಬೇಡ್ಕರ್ ಭವನದಲ್ಲಿ "ವೈಶಾಖ ಬುದ್ಧ ಪೂರ್ಣಿಮೆ - 2022" ಕಾರ್ಯಕ್ರಮ ನಡೆಯಿತು. ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ ,ಶಾಸಕರಾದ ಕೆ. ರಘುಪತಿ ಭಟ್ ಭಾಗವಹಿಸಿ ಬುದ್ಧನ ಪ್ರತಿಮೆಗೆ ಗೌರವ ಸಮರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಬುದ್ಧಿಸ್ಟ್ ಸೊಸೈಟಿ ಆಫ್ ಇಂಡಿಯಾ (BSI) ಉಡುಪಿ ಜಿಲ್ಲೆಯ ಅಧ್ಯಕ್ಷರಾದ ರಾಘವೇಂದ್ರ ಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬ್ರಹ್ಮಾವರ ತಹಶೀಲ್ದಾರರಾದ ರಾಜಶೇಖರ್ ಮೂರ್ತಿ, ಉಡುಪಿ ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳಾದ ಭಕ್ತ ಮಾರ್ಕಾಂಡೇಯ, ಸಂಬುಧ್ಧ ಎಜುಕೇಶನಲ್ ಕಲ್ಚರಲ್ ಆಂಡ್ ಚಾರಿಟೇಬಲ್ ಟ್ರಸ್ಟ್ (ರಿ.) ಉಪಾಧ್ಯಕ್ಷರಾದ ಗೋಪಾಲಕೃಷ್ಣ, ಬುದ್ಧಿಸ್ಟ್ ಸೊಸೈಟಿ ಆಫ್ ಇಂಡಿಯಾ (BSI) ಉಡುಪಿ ಜಿಲ್ಲೆಯ ಟ್ರಸ್ಟಿಗಳಾದ ಕುಶಲ ರವೀಂದ್ರ ಹಾಗೂ ಪ್ರಮುಖರು ಉಪಸ್ಥಿತರಿದ್ದರು.
Kshetra Samachara
16/05/2022 12:49 pm