ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: "ಅಮೃತ ಭಾರತಿಗೆ ಕನ್ನಡದ ಆರತಿ" ಪೂರ್ವ ತಯಾರಿ ಬಗ್ಗೆ ಶಾಸಕ ರಘುಪತಿ ಭಟ್ ಸಭೆ

ಉಡುಪಿ: "ಅಮೃತ ಭಾರತಿಗೆ ಕನ್ನಡದ ಆರತಿ" ಶೀರ್ಷಿಕೆಯಡಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಕಾರ್ಯಕ್ರಮ ದಿನಾಂಕ 28-05-2022 ರಂದು ಜಿಲ್ಲೆಯಾದ್ಯಂತ ನಡೆಯಲಿದ್ದು, ಇದರ ಪೂರ್ವ ಸಿದ್ಧತೆಯ ಕುರಿತು ಇಂದು ದಿನಾಂಕ 24-05-2022 ರಂದು ಮಣಿಪಾಲದ ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ಕಚೇರಿಯಲ್ಲಿ ಶಾಸಕ ಕೆ. ರಘುಪತಿ ಭಟ್ ರವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.ಶಾಸಕರು ಸಭೆಯಲ್ಲಿ ಕಾರ್ಯಕ್ರಮದ ಪೂರ್ವತಯಾರಿಯ ಸ್ಥಿತಿ ಗತಿಯ ಬಗ್ಗೆ ಮಾಹಿತಿ ಪಡೆದು ಚರ್ಚಿಸಿದರು.

ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಅಪರ ಜಿಲ್ಲಾಧಿಕಾರಿಗಳಾದ ವೀಣಾ, ಜಿಲ್ಲಾ ಆರೋಗ್ಯಾಧಿಕಾರಿಗಳಾದ ನಾಗಭೂಷಣ್ ಉಡುಪ, ಉಡುಪಿ ತಹಶೀಲ್ದಾರರಾದ ಅರ್ಚನಾ ಭಟ್, ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಕೆಂಪೇಗೌಡ, ನಗರ ಸಭೆಯ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಯಶ್ವಂತ್ ಪ್ರಭು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

25/05/2022 02:20 pm

Cinque Terre

770

Cinque Terre

0

ಸಂಬಂಧಿತ ಸುದ್ದಿ