ಉಡುಪಿ: ಜೀರ್ಣೋದ್ಧಾರಗೊಂಡಿರುವ ಉಡುಪಿ ಕಡಿಯಾಳಿ ಶ್ರೀಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಹಿತ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿದ್ದು ಇಂದು ಬ್ರಹ್ಮಕಲಶೋತ್ಸವದ ಧರ್ಮ ಸಭೆ ಜರುಗಿತು.
ಬಂಟ್ವಾಳ ಒಡಿಯೂರು ಮಠದ ಶ್ರೀ ಗುರುದೇವಾನಂದ ಸ್ವಾಮೀಜಿ ಅವರು ಕಾರ್ಯಕ್ರಮನ್ನು ಉದ್ಘಾಟಿಸಿದರೆ, ಪಲಿಮಾರು ಮಠದ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಆಶೀರ್ವಚಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಕೆ. ರಘುಪತಿ ಭಟ್ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷರು, ಡಾl. ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್, ಪ್ರವರ್ತಕರಾದ ನಾಡೋಜ ಜಿ. ಶಂಕರ್ . ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕಾರಿ ಸದಸ್ಯರಾದ ಕಲ್ಲಡ್ಕ ಪ್ರಭಾಕರ ಭಟ್, ಆದಿತಿ ಬಿಲ್ಡರ್ಸ್ ಉಡುಪಿಯ ರಂಜನ್ ಕೆ, ಎ.ಕೆ ಡೆವಲಪರ್ಸ್ ಉಡುಪಿಯ ಕರುಣಾಕರ ಶೆಟ್ಟಿ, ನಗರಸಭಾ ಸದಸ್ಯರಾದ ಸವಿತಾ ಹರೀಶ್ ರಾಮ್, ನಗರ ಸಭೆಯ ನಾಮ ನಿರ್ದೇಶಿತ ಸದಸ್ಯರಾದ ಅರುಣಾ ಎಸ್ ಪೂಜಾರಿ, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ನಾಗೇಶ್ ಹೆಗ್ಡೆ, ಕಡಿಯಾಳಿ ಶ್ರೀ ಮಹಿಷಮರ್ಧಿನಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ. ರವಿರಾಜ್ ಆಚಾರ್ಯ, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ನಾಗೇಶ್ ಹೆಗ್ಡೆ, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಪುರುಶೋತ್ತಮ್ ಶೆಟ್ಟಿ, ಜೀರ್ಣೋದ್ಧಾರ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ರಾಘವೇಂದ್ರ ಕಿಣಿ, ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಕೆ. ಮಂಜುನಾಥ್ ಹೆಬ್ಬಾರ್ ಉಪಸ್ಥಿತರಿದ್ದರು.
Kshetra Samachara
08/06/2022 08:36 pm