ಉಡುಪಿ : ಕನ್ನಡದ ಖ್ಯಾತ ವಿದ್ವಾಂಸ ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ್ ೨೦೨೨ನೇ ಸಾಲಿನ ಸೇಡಿಯಾಪು ಕೃಷ್ಣ ಭಟ್ಟ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು 10,000ರೂ. ನಗದು ಹಾಗೂ ಪ್ರಶಸ್ತಿ ಫಲಕವನ್ನೊಳಗೊಂಡಿರುತ್ತದೆ.
ಕನ್ನಡ ಭಾಷೆ, ಸಾಹಿತ್ಯ, ವ್ಯಾಕರಣ, ಭಾಷಾ ಶಾಸ್ತ್ರ, ಕಥನ ಕಾವ್ಯ ಮತ್ತು ಸಂಶೋಧನ ಕ್ಷೇತ್ರಗಳಲ್ಲಿ ಮಹತ್ವದ ಕೊಡುಗೆ ನೀಡಿರುವ ಸೇಡಿಯಾಪು ಕೃಷ್ಣ ಭಟ್ಟರ ನೆನಪಿನಲ್ಲಿ ಈ ಪ್ರಶಸ್ತಿಯನ್ನು ಪ್ರತಿವರ್ಷ ನೀಡಲಾಗುತ್ತಿದೆ ಎಂದು ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಆಡಳಿತಾಧಿಕಾರಿ ಡಾ. ಬಿ. ಜಗದೀಶ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Kshetra Samachara
14/06/2022 10:56 am