ಉಡುಪಿ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ , ಅಭಿಯೋಜನಾ ಇಲಾಖೆ, ಆಯುಷ್, ತೋಟಗಾರಿಕೆ ಹಾಗೂ ಅರಣ್ಯ ಇಲಾಖೆಗಳ ಸಹಯೋಗದೊಂದಿಗೆ ಇಂದು ಗಿಡಮೂಲಿಕೆ ಮತ್ತು ಔಷಧೀಯ ಸಸಿಗಳನ್ನು ನೆಡುವ ಕಾರ್ಯಕ್ರಮಕ್ಕೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶಾಂತವೀರ ಶಿವಪ್ಪರ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಔಷಧೀಯ ಹಾಗೂ ಯಾವುದೇ ಗಿಡಗಳಾಗಲಿ ಮನುಷ್ಯನಿಗೆ ಉಸಿರಾಡಲು ಒಳ್ಳೆಯ ಆಕ್ಸಿಜನ್ ನೀಡುತ್ತದೆ, ನಮ್ಮ ಆರೋಗ್ಯ ಚೆನ್ನಾಗಿರುತ್ತದೆ. ಹೀಗಾಗಿ ಹಸಿರು ಬೆಳೆಸಿ ಉಳಿಸುವ ಪಣ ತೊಡೋಣ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು, ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ.ಎಸ್, ಎಲ್ಲ ನ್ಯಾಯಾಧೀಶರುಗಳು,ಜಿಲ್ಲಾ ಸರ್ಕಾರಿ ಅಭಿಯೋಜಕರಾದ ಶಾಂತಿಬಾಯಿ, ಉಪ ವಲಯ ಅರಣ್ಯಾಧಿಕಾರಿಗಳಾದ ಗುರುರಾಜ್, ತೋಟಗಾರಿಕೆ ಇಲಾಖೆಯ ಭುವನೇಶ್ವರಿ, ಆಯುಷ್ ಇಲಾಖೆಯ ಡಿ ಎ ಓ ಸತೀಶ್ ಆಚಾರ್ಯ, ವಕೀಲರ ಸಂಘದ ಅಧ್ಯಕ್ಷರಾದ ಬಿ ನಾಗರಾಜ್ ಹಾಗೂ ಎಲ್ಲಾ ವಕೀಲರು, ನ್ಯಾಯಾಂಗ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
Kshetra Samachara
28/06/2022 05:22 pm