ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ರಾಜ್ಯ ಮಟ್ಟದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ , ಉಡುಪಿ ಜಿಲ್ಲಾ ರಜತ ಮಹೋತ್ಸವ ಆಚರಣೆ ಕುರಿತು ಸಭೆ

ಉಡುಪಿ: ರಾಜ್ಯ ಮಟ್ಟದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ಕುರಿತಾಗಿ ಹಾಗೂ ಉಡುಪಿ ಜಿಲ್ಲೆ ರಚನೆಯಾಗಿ ಅಗಸ್ಟ್ 25 ಕ್ಕೆ 25 ವರ್ಷ ಪೂರ್ಣಗೊಳ್ಳುತ್ತಿದ್ದು, ಇದರ ರಜತ ಮಹೋತ್ಸವ ಆಚರಣೆಯ ಪೂರ್ವ ತಯಾರಿಯ ಕುರಿತು ಇಂದು ಶಾಸಕರಾದ ಕೆ. ರಘುಪತಿ ಭಟ್ ರವರು ಸಭೆ ನಡೆಸಿ ಚರ್ಚಿಸಿ ತಮ್ಮ ಸಲಹೆ ಸೂಚನೆಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ, ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ಜಿಲ್ಲಾ ಬಿಜೆಪಿ ಕೋಶಾಧಿಕಾರಿಗಳಾದ ಪ್ರವೀಣ್ ಶೆಟ್ಟಿ ಕಪ್ಪೆಟ್ಟು ನಗರಸಭಾ ಸದಸ್ಯರಾದ ಗಿರೀಶ್ ಅಂಚನ್ ಹಾಗೂ ಉಡುಪಿ ನಗರಸಭೆಯ ಪೌರಾಯುಕ್ತರಾದ ಉದಯ್ ಶೆಟ್ಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಪೂರ್ಣಿಮಾ ಮತ್ತಿತರರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

03/08/2022 04:36 pm

Cinque Terre

1.13 K

Cinque Terre

0

ಸಂಬಂಧಿತ ಸುದ್ದಿ