ಮಣಿಪಾಲ: ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಿಸುತ್ತಿರುವ ಸಂದರ್ಭದಲ್ಲಿ ಹಮ್ಮಿಕೊಂಡಿರುವ ಹರ್ ಘರ್ ತಿರಂಗಾ ಅಭಿಯಾನದಡಿ ಮಣಿಪಾಲ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ವತಿಯಿಂದ ನೀಡಲಾದ 13000 ರಾಷ್ಟ್ರಧ್ವಜಗಳನ್ನು ಜಿಲ್ಲಾಧಿಕಾರಿಗಳ ಪರವಾಗಿ ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್. ಸ್ವೀಕರಿಸಿದರು.
ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಅಧ್ಯಕ್ಷ ಕೆ.ಪ್ರಶಾಂತ್ ಬಾಳಿಗಾ, ಸಂಘಧ ಸದಸ್ಯರಾದ ಹರೀಶ್ ಕುಂದರ್, ವಲ್ಲಭ್ ಭಟ್, ರಮೇಶ್ ನಾಯಕ್ ತೆಕ್ಕಟ್ಟೆ, ಸಂತೋಷ್ ನಾಯಕ್ ತೆಕ್ಕಟ್ಟೆ, ನಿರಾಳಿ ವೋರಾ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ನಾಗರಾಜ ನಾಯಕ್, ಉಪ ನಿರ್ದೇಶಕ ಸೀತಾರಾಮ ಶೆಟ್ಟಿ ಉಪಸ್ಥಿತರಿದ್ದರು.
Kshetra Samachara
11/08/2022 08:47 pm