ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಕೃಷ್ಣ ವೇಷ ಸ್ಪರ್ಧೆ ವಿಜೇತರಿಗೆ ಸಚಿವ ಸುನಿಲ್ ಕುಮಾರ್ ಬಹುಮಾನ ವಿತರಣೆ

ಉಡುಪಿ: ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಉಡುಪಿ ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ಶುಕ್ರವಾರ ಆಯೋಜಿಸಲಾದ ರಾಜ್ಯ ಮಟ್ಟದ ಶ್ರೀಕೃಷ್ಣ ಜಯಂತಿ ಆಚರಣೆಯ ಸಮಾರೋಪ ಸಮಾರಂಭದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗಾಗಿ ನಡೆದ ನೃತ್ಯ ಸ್ಪರ್ಧೆ ಹಾಗೂ ಕೃಷ್ಣ ವೇಷ ಸ್ಪರ್ಧೆಯ ವಿಜೇತರಿಗೆ ರಾಜ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ ಬಹುಮಾನ ವಿತರಿಸಿದರು.

ನೃತ್ಯ ಸ್ಪರ್ಧೆ ವಿಜೇತರು: ಉಡುಪಿಯ ಸೃಷ್ಟಿ ನೃತ್ಯ ಕಲಾ ಕುಟೀರ ಪ್ರಥಮ, ಕಾರ್ಕಳದ ಮುನಿಯಾಲ್ ಆಯುರ್ವೇದಿಕ್ ಮೆಡಿಕಲ್ ಸೈನ್ಸ್ ಕಾಲೇಜು ದ್ವಿತೀಯ ಹಾಗೂ ಮೂಡುಬಿದಿರೆ ಆಳ್ವಾಸ್ ತೃತೀಯ ಬಹುಮಾನ ಪಡೆದವು.

ಕೃಷ್ಣ ವೇಷ ಸ್ಪರ್ಧೆ ವಿಜೇತರು: ಮಂಗಳೂರು ನಂದಗೋಕುಲ ಶ್ವೇತಾ ಅರೆಹೊಳೆ ಪ್ರಥಮ, ಉಡುಪಿಯ ಸೃಷ್ಟಿ ನೃತ್ಯ ಕಲಾ ಕುಟೀರದ ಜಾನಕಿ ದ್ವಿತೀಯ ಹಾಗೂ ಉಡುಪಿ ಅಮ್ಮುಂಜೆಯ ಶ್ರೀಭ್ರಾಮರಿ ನಾಟ್ಯಾಲಯದ ಯಶಸ್ವಿ ತೃತೀಯ ಬಹುಮಾನ ಪಡೆದರು.

ಬಳಿಕ ಪರ್ಯಾಯ ಕೃಷ್ಣಾಪುರ ಮಠದ ಶ್ರೀವಿಧ್ಯಾಸಾಗರ ತೀರ್ಥರು ಅನುಗ್ರಹ ಸಂದೇಶ ನೀಡಿದರು.

Edited By : PublicNext Desk
Kshetra Samachara

Kshetra Samachara

20/08/2022 09:10 pm

Cinque Terre

1.71 K

Cinque Terre

0

ಸಂಬಂಧಿತ ಸುದ್ದಿ