ಉಡುಪಿ: ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕಿನ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಕರ್ನಾಟಕ ರಾಜ್ಯ ಯುವ ಸಂಘಟನೆಗಳ ಒಕ್ಕೂಟ ಹಾಗೂ ಜಿಲ್ಲಾ ಘಟಕ ವತಿಯಿಂದ 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಏರ್ಪಡಿಸಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಂಗಭೂಮಿ ಕ್ಷೇತ್ರದ ಸಾಧನೆಗಾಗಿ ಉಡುಪಿ ಜಿಲ್ಲೆಯಿಂದ ಆಯ್ಕೆಯಾದ ರಾಮಾಂಜಿ ನಮ್ಮ ಭೂಮಿ ಅವರಿಗೆ ಶಾಸಕ ಡಿ.ಎಸ್.ಸುರೇಶ್ ಅವರು ಪ್ರಶಸ್ತಿ ಪ್ರದಾನ ಮಾಡಿದರು.
ಈ ಸಂದರ್ಭದಲ್ಲಿ ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕ ಎಂ.ಸಿ.ರಮೇಶ, ರಾಜ್ಯ ಯುವ ಸಂಘಟನೆಗಳ ಒಕ್ಕೂಟದ ಅಧ್ಯಕ್ಷರಾದ ಡಾ.ಎಸ್.ಬಾಲಾಜಿ, ಜಿಲ್ಲಾ ಕಸಾಪ ಅಧ್ಯಕ್ಷ ಸೂರಿ ಶ್ರೀನಿವಾಸ್, ಜಿಲ್ಲಾ ಯುವ ಸಂಘಟನೆಗಳ ಒಕ್ಕೂಟದ ಅಧ್ಯಕ್ಷರಾದ ಇಮ್ರಾನ್ ಅಹ್ಮದ್ ಬೇಗ್, ಕಾರ್ಯದರ್ಶಿ ನವೀನ್ ಪೆನ್ನಯ್ಯ, ಪುರಸಭೆ ಸದಸ್ಯರಾದ ಟಿ.ಎಂ.ಬೋಜರಾಜ್, ಕನ್ನಡ ಜಾನಪದ ಪರಿಷತ್ ನ ಜಿಲ್ಲಾಧ್ಯಕ್ಷರಾದ ಪೂರ್ಣೇಶ್ ನರಸಿಂಹರಾಜಪುರ, ನೆಹರೂ ಯುವ ಕೇಂದ್ರದ ಅಭಿಷೇಕ್ ಜಾವರೆ, ಜಿ.ಪಂ.ಸದಸ್ಯರಾದ ಎ.ಸಿ.ಚಂದ್ರಪ್ಪ, ಸಾಹಿತಿ ಭಗವಾನ್ ಮೊದಲಾದವರು ಉಪಸ್ಥಿತರಿದ್ದರು.
Kshetra Samachara
22/08/2022 05:38 pm