ಕುಂದಾಪುರ : ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢಶಾಲೆಯ ವಿದ್ಯಾರ್ಥಿನಿ ಗಾರ್ಗಿದೇವಿ, ಗುರುದೇವ್ ಅಕಾಡೆಮಿ ಆಫ್ ಆರ್ಟ್ಸ್ ರವರಿಂದ ಮಂಡ್ಯದಲ್ಲಿ ಆಯೋಜನೆಗೊಂಡ ರಾಷ್ಟ್ರ ಮಟ್ಚದ ಭರತನಾಟ್ಯ ಸ್ಪರ್ಧೆ "ಗುರುದೇವೋತ್ಸವ 2022" ದಲ್ಲಿ ಪ್ರಥಮ ಸ್ಥಾನದೊಂದಿಗೆ ನಾಟ್ಯ ಮಂದಾರ ಪ್ರಶಸ್ತಿ ಪಡೆದು ಸಂಸ್ಥೆಗೆ ಕೀರ್ತಿ ತಂದಿರುತ್ತಾರೆ.
ಸಂಸ್ಥೆಯ ಪ್ರಾಂಶುಪಾಲೆ ಚಿಂತನಾ ರಾಜೇಶ್ ಮಾರ್ಗದರ್ಶನ ಮತ್ತು ಭರತನಾಟ್ಯ ಶಿಕ್ಷಕಿಯಾದ ಪ್ರವಿತಾ ಅಶೋಕ್ ರವರಿಂದ ತರಬೇತಿಯನ್ನು ಪಡೆಯುತ್ತಿದ್ದಾರೆ . ಸಂಸ್ಥೆಯ ಉಪಪ್ರಾಂಶುಪಾಲೆ ಮತ್ತು ಪ್ರೌಢಶಾಲಾ ಮುಖ್ಯ ಶಿಕ್ಷಕಿ ಶುಭಾ ಕೆ. ಎನ್., ಸಹಾಯಕ ಮುಖ್ಯ ಶಿಕ್ಷಕ ಚಂದ್ರಶೇಖರ್ ಶೆಟ್ಟಿಯವರು ವಿದ್ಯಾರ್ಥಿನಿಯನ್ನು ಅಭಿನಂದಿಸಿದರು.
Kshetra Samachara
29/08/2022 03:52 pm