ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಕರ್ನಾಟಕ ಮಕ್ಕಳ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಅದ್ವಿಕಾ ಶೆಟ್ಟಿ ಆಯ್ಕೆ

ಉಡುಪಿ: ಅಂಬಲಪಾಡಿ ದೇವಾಲಯದ ಭವಾನಿ ಮಂಟಪದಲ್ಲಿ ಸೆ.4 ರಂದು ಬೆಳಿಗ್ಗೆ 9 ಗಂಟೆಗೆ ನಡೆಯಲಿರುವ ಒಂದು ದಿನದ ಕರ್ನಾಟಕ ಮಕ್ಕಳ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಅದ್ವಿಕಾ ಶೆಟ್ಟಿ ಆಯ್ಕೆಯಾಗಿದ್ದಾರೆ.

ಯಕ್ಷಗಾನ, ನಟನೆ, ನೃತ್ಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಅವರು ದ.ಕ ಜಿಲ್ಲಾ ರಾಜ್ಯೋತ್ಸವ ಸಹಿತ ಅನೇಕ ಪ್ರಶಸ್ತಿಗಳಿಗೆ ಪಾತ್ರರಾಗಿದ್ದು ಅಂತಿಮ ಸುತ್ತಿನಲ್ಲಿ ಆಯ್ಕೆಯಾಗಿದ್ದಾರೆ ಎಂದು ಸಂಘಟಕ, ಹಿರಿಯ ಪತ್ರಕರ್ತ ಡಾ. ಶೇಖರ ಅಜೆಕಾರು ತಿಳಿಸಿದ್ದಾರೆ. ದೇವಾಲಯದ ಧರ್ಮದರ್ಶಿ ಡಾ.ನಿ.ಬಿ.ವಿಜಯ ಬಲ್ಲಾಳ್ ಅವರು ಹಿರಿಯ ಸಮಾಜ ಸೇವಕ ವಿಶ್ವ ಸಂಸ್ಕೃತಿ ಪ್ರತಿಷ್ಠಾನದ ಗೌರವಾಧ್ಯಕ್ಷ ವಿಶ್ವನಾಥ ಶೆಣೈ ಅವರ ಉಪಸ್ಥಿತಿಯಲ್ಲಿ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ.

Edited By : PublicNext Desk
Kshetra Samachara

Kshetra Samachara

01/09/2022 07:23 pm

Cinque Terre

1.23 K

Cinque Terre

0

ಸಂಬಂಧಿತ ಸುದ್ದಿ