ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಣಿಪಾಲ: ಪ್ರಧಾನಿ ಜನ್ಮದಿನ : ರಕ್ತದಾನ ಶಿಬಿರ ಉದ್ಘಾಟಿಸಿದ ಶಾಸಕ ರಘುಪತಿ ಭಟ್

ಮಣಿಪಾಲ: ನರೇಂದ್ರ ಮೋದಿಯವರ 72ನೇ ಜನ್ಮದಿನದ ಅಂಗವಾಗಿ ಭಾರತೀಯ ಜನತಾ ಪಾರ್ಟಿ ಉಡುಪಿ ನಗರ, ಬಿಜೆಪಿ ಯುವ ಮೋರ್ಚಾ ಉಡುಪಿ ನಗರ, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ (ರಿ) ಉಡುಪಿ, ರಕ್ತ ನಿಧಿ ವಿಭಾಗ ಕೆ.ಎಂ.ಸಿ ಮಣಿಪಾಲ ಇವರ ಸಹಯೋಗದೊಂದಿಗೆ ಇಂದು ಆಯೋಜಿಸಲಾದ "ಸ್ವಯಂ ಪ್ರೇರಿತ ರಕ್ತದಾನ ಶಿಬಿರ"ವನ್ನು ಶಾಸಕ ಕೆ. ರಘುಪತಿ ಭಟ್ ಅವರು ಉದ್ಘಾಟಿಸಿ ಕಾರ್ಯಕ್ರಮದ ಆಯೋಜಕರಿಗೆ ಹಾಗೂ ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡುತ್ತಿರುವ ರಕ್ತದಾನಿಗಳಿಗೆ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ಜಿಲ್ಲಾ ಬಿಜೆಪಿ ವಕ್ತಾರರಾದ ರಾಘವೇಂದ್ರ ಕಿಣಿ, ನಗರ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ ರೋಷನ್ ಶೆಟ್ಟಿ, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ನ ಸತೀಶ್ ಸಾಲ್ಯಾನ್, ಕೆ.ಎಂ.ಸಿ ರಕ್ತ ನಿಧಿ ವಿಭಾಗ ಡಾll. ಶಮಿ ಶಾಸ್ತ್ರಿ ಹಾಗೂ ನಗರ ಯುವ ಮೋರ್ಚಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

17/09/2022 07:59 pm

Cinque Terre

1.29 K

Cinque Terre

0

ಸಂಬಂಧಿತ ಸುದ್ದಿ