ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳ್ಮಣ್ : ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಕಾರ್ಕಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕಾಪು ತಾಲೂಕು ಬೆಳ್ಮಣ್ ವಲಯದ ಬೆಳ್ಮಣ್ ನಂದಳಿಕೆ ಕಾರ್ಯಕ್ಷೇತ್ರದ ಬೆಳ್ಮಣ್ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಜರಗಿತು.

ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಶ್ರೀಮತಿ ಕಿಶೋರಿ ಕಾರ್ಯಕ್ರಮ ಉದ್ಘಾಟಿಸಿದರು.ಒಕ್ಕೂಟದ ಅಧ್ಯಕ್ಷರಾದ ನಾಗೇಶ್ ಅಧ್ಯಕ್ಷತೆ ವಹಿಸಿದ್ದರು.

ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ಸೂಡ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಶಿವಪ್ರಸಾದ್ ಅಡಿಗ ಮಾತನಾಡಿ, ದುಶ್ಚಟ ಮುಕ್ತ ಸಮಾಜ ರೂಪಿಸುವಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ತರವಾದದ್ದು, ಯಾವುದೇ ರೀತಿಯ ಒತ್ತಡಕ್ಕೆ ಒಳಗಾಗದೆ, ಇಂದಿನ ಯುವ ಜನಾಂಗ ಪ್ರಜ್ಞಾವಂತ ನಾಯಕರಾಗಿ, ರಾಮ ರಾಜ್ಯದ ಕನಸು ನನಸಾಗುವಲ್ಲಿ ಪಾಲ್ಗೊಳ್ಳಬೇಕೆಂದು ಕರೆ ನೀಡಿ, ವಿದ್ಯಾರ್ಥಿಗಳಿಗೆ ಸ್ವಾಸ್ಥ್ಯ ಸಂಕಲ್ಪದ ಪ್ರತಿಜ್ಞೆ ಮಾಡಿಸಿದರು.

ತಾಲೂಕು ಜನಜಾಗೃತಿ ಸದಸ್ಯರಾದ ಶಂಕರ್ ಕುಂದರ್ ಸೂಡ, ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಗೋಪಾಲ್, ವಲಯದ ಸೇವಾಪ್ರತಿನಿಧಿಗಳು ಮತ್ತು ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

ಸೇವಾ ಪ್ರತಿನಿಧಿ ಶ್ರೀಮತಿ ರಜನಿ ಸ್ವಾಗತಿಸಿ, ಕಾಲೇಜಿನ ಉಪನ್ಯಾಸಕಿ ಶ್ರೀಮತಿ ಶುಭಲಕ್ಷ್ಮಿ ವಂದಿಸಿದರು. ವಲಯ ಮೇಲ್ವಿಚಾರಕರಾದ ಶ್ರೀಮತಿ ಭಾರತಿ ಕಾರ್ಯಕ್ರಮ ನಿರೂಪಿಸಿದರು.

Edited By : PublicNext Desk
Kshetra Samachara

Kshetra Samachara

27/09/2022 03:57 pm

Cinque Terre

1.18 K

Cinque Terre

0

ಸಂಬಂಧಿತ ಸುದ್ದಿ