ಕಾರ್ಕಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಮಿಯ್ಯಾರ್ ವಲಯದ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ ಶಿವಂ ಜ್ಞಾನವಿಕಾಸ ಕೇಂದ್ರದ ಉದ್ಘಾಟನೆ ಭಾನುವಾರ ನಡೆಯಿತು.
ಯೋಜನೆಯ ಕಾರ್ಕಳ ತಾಲೂಕಿನ ಯೋಜನಾಧಿಕಾರಿ ಭಾಸ್ಕರ್. ವಿ. ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಯೋಜನೆಯ ಕಾರ್ಯಕ್ರಮಗಳ ಬಗ್ಗೆ, ಜ್ಞಾನ ವಿಕಾಸ ಕಾರ್ಯಕ್ರಮದ ಉದ್ದೇಶ, ಜ್ಞಾನವಿಕಾಸ ಕಾರ್ಯಕ್ರಮಗಳಲ್ಲಿ ಸಿಗುವ ಮಾಹಿತಿಗಳ ಬಗ್ಗೆ ಸದಸ್ಯರಿಗೆ ಮಾಹಿತಿ ನೀಡಿದರು.
ಒಕ್ಕೂಟದ ಅಧ್ಯಕ್ಷರಾದ ವಿನೋದ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಒಕ್ಕೂಟದ ಉಪಾಧ್ಯಕ್ಷೆ ಶಾಂತಿ, ವಲಯ ಮೇಲ್ವಿಚಾರಕಿ ದಿವ್ಯಶ್ರೀ ,ತಾಲೂಕು ಜ್ಞಾನವಿಕಾಸ ಸಮನ್ವಯಾಧಿಕಾರಿ ಮಲ್ಲಿಕಾ ,ಸೇವಾ ಪ್ರತಿನಿಧಿ ಸುರೇಖಾ, ಜ್ಞಾನ ವಿಕಾಸ ಕೇಂದ್ರದ ಹಾಗೂ ಸಂಘಗಳ ಸದಸ್ಯರು ಉಪಸ್ಥಿತರಿದ್ದರು. ಗತಿಸಿ, ಮಲ್ಲಿಕಾ ಕಾರ್ಯಕ್ರಮ ನಿರೂಪಿಸಿದರು. ದಿವ್ಯಶ್ರೀ ವಂದಿಸಿದರು.
Kshetra Samachara
02/10/2022 05:06 pm