ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ದುಶ್ಚಟಮುಕ್ತ ಸಮಾಜ ನಿರ್ಮಾಣದಲ್ಲಿ ಮದ್ಯವರ್ಜನ ಶಿಬಿರದ ಪಾತ್ರ ಮಹತ್ವಪೂರ್ಣ: ಪ್ರಮೋದ್ ಕುಮಾರ್

ಉಡುಪಿ: ದೇಶೀಯತೆ ಹಾಗೂ ಸುಸಂಸ್ಕೃತ ಶ್ರೇಷ್ಠ ಪರಂಪರೆಯನ್ನು ಉಳಿಸಿ ಬೆಳೆಸಲು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳು ವಿಶೇಷ ಒತ್ತು ನೀಡುತ್ತಿವೆ. ಈ ನಿಟ್ಟಿನಲ್ಲಿ ದುಶ್ಚಟಮುಕ್ತ ಸ್ವಸ್ಥ ಸಮಾಜ ನಿರ್ಮಾಣದಲ್ಲಿ ಮದ್ಯವರ್ಜನ ಶಿಬಿರದ ಪಾತ್ರ ಅತ್ಯಂತ ಮಹತ್ವಪೂರ್ಣ ಎಂದು‌ ಉಡುಪಿ‌ ನಗರ ಪೋಲಿಸ್ ನಿರೀಕ್ಷಕ ಪ್ರಮೋದ್ ಕುಮಾರ್ ಹೇಳಿದರು.

ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್(ರಿ.) ಉಡುಪಿ ಹಾಗೂ ಕಾಪು ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್(ರಿ.) ಬೆಳ್ತಂಗಡಿ, ಶ್ರೀ ಮಂಜುನಾಥೇಶ್ವರ ವ್ಯಸನಮುಕ್ತ ಮತ್ತು ಸಂಶೋಧನಾ ಕೇಂದ್ರ ಉಜಿರೆ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ಭಗವತೀ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಪುತ್ತೂರು, ಮೂಕಾಂಬಿಕಾ ಪಾಲಿ ಪ್ರಾಡಕ್ಟ್ಸ್ ಕೊಡಂಕೂರು ಪುತ್ತೂರು, ಲಯನ್ಸ್ ಕ್ಲಬ್ ಪರ್ಕಳ ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಪುತ್ತೂರು ಭಗವತೀ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ಅ‌.11ರಿಂದ 18ರ ವರೆಗೆ ನಡೆಯುವ 1601ನೇ ಮದ್ಯವರ್ಜನ ಶಿಬಿರವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ! ಡಿ.ವೀರೇಂದ್ರ ಹೆಗ್ಗಡೆಯವರು ರಾಮ ರಾಜ್ಯದ ಕನಸನ್ನು ನನಸಾಗಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಉತ್ತಮ ಸೇವೆ ಸಲ್ಲಿಸುತ್ತಿದ್ದಾರೆ. ಮದ್ಯವರ್ಜನ ಶಿಬಿರದಲ್ಲಿ ಭಾಗವಹಿಸುವ ಶಿಬಿರಾರ್ಥಿಗಳು ಸ್ವಯಂ ಮನಪರಿವರ್ತನೆಯೊಂದಿಗೆ ತಮ್ಮ ಮನೆಗಳಲ್ಲಿ ಆತ್ಮೀಯತೆ, ಪರಸ್ಪರ ಸಹಕಾರ ಮನೋಭಾವ, ಪ್ರೀತಿ-ವಿಶ್ವಾಸದ ಸಹಬಾಳ್ವೆ ನಡೆಸುವಂತಾಗಲಿ. ಎಲ್ಲರ ಬದುಕಿನಲ್ಲಿ ಭರವಸೆಯ ಹೊಸ ಬೆಳಕು ಮೂಡಲಿ ಎಂದರು.

ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಪ್ರಸಾದ್ ರಾವ್ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಜನಜಾಗೃತಿ ವೇದಿಕೆ ಉಡುಪಿ ತಾಲೂಕು ಅಧ್ಯಕ್ಷ ಅಚ್ಚುತ ಪೂಜಾರಿ, ಉಡುಪಿ ‌ನಗರಸಭೆ ಅಧ್ಯಕ್ಷೆ ಸುಮಿತ್ರ ಆರ್. ನಾಯಕ್, ವ್ಯವಸ್ಥಾಪನಾ ಸಮಿತಿಯ ಗೌರವಾಧ್ಯಕ್ಷ ಸಿದ್ಧರಾಜು, ಜನಜಾಗೃತಿ ವೇದಿಕೆಯ ಅಂಬಾಗಿಲು ವಲಯಾಧ್ಯಕ್ಷ ಹರೀಶ್ ಕೋಟ್ಯಾನ್, ನಗರಸಭಾ ಸದಸ್ಯ ಯೋಗೀಶ್ ಸಾಲ್ಯಾನ್ ಹಾಗೂ ಪ್ರಗತಿಬಂಧು ಸ್ವಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷೆ ಶಮಿತ ಪಿ. ಶೆಟ್ಟಿ ಮಾತನಾಡಿ ಶುಭಾಂಶನೆಗೈದರು.

Edited By : PublicNext Desk
Kshetra Samachara

Kshetra Samachara

11/10/2022 06:35 pm

Cinque Terre

918

Cinque Terre

0

ಸಂಬಂಧಿತ ಸುದ್ದಿ