ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ವಿಶೇಷ ಶಾಲಾ ಶಿಕ್ಷಕರ ಗೌರವಧನ ದ್ವಿಗುಣಕ್ಕೆ ಒತ್ತಾಯಿಸಿ ಸಿಎಂ ಆಪ್ತ ಸಹಾಯಕರಿಗೆ ಮನವಿ

ಉಡುಪಿ: ವಿಶೇಷ ಮಕ್ಕಳ ಶಿಕ್ಷಕ ಶಿಕ್ಷಕೇತರ ಸಿಬ್ಬಂದಿಯ ಗೌರವಧನ ದ್ವಿಗುಣಗೊಳಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿಗಳ ಆಪ್ತ ಸಹಾಯಕ ಪಿ.ಕೆ ಪುರುಷೋತ್ತಮ್ ಅವರಿಗೆ ವಿಶೇಷ ಶಿಕ್ಷಕರು ಮನವಿ ಸಲ್ಲಿಸಿದ್ದಾರೆ.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಮುಜರಾಯಿ ಹಾಗೂ ಬಂದರು ಮತ್ತು ಮೀನುಗಾರಿಕಾ ಸಚಿವರು, ದ.ಕನ್ನಡ ಉಸ್ತುವಾರಿ ಸಚಿವರಿಗೂ ಹಾಗೂ ಶ್ರೀ ಜಯಪ್ರಕಾಶ್ ಹೆಗ್ಡೆ ಇವರಿಗೂ ಮನವಿ ನೀಡಲಾಯಿತು. ಮುಖ್ಯ ಮಂತ್ರಿಗಳ ಆಪ್ತ ಸಹಾಯಕರು ಸಕಾರಾತ್ಮಕ ಸ್ಪಂದನೆಯನ್ನು ನೀಡುವುದರೊಂದಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರಲ್ಲಿ ಹಾಗೂ ಮಾನ್ಯ ಮುಖ್ಯಮಂತ್ರಿಗಳಲ್ಲಿ ಈ ಬಗ್ಗೆ ಚರ್ಚಿಸಿ ಪ್ರೋತ್ಸಾಹಿಸುವ ಬಗ್ಗೆ ತಿಳಿಸಿದರು.

ಈ ಸಂದರ್ಭ ಪ್ರಧಾನ ಕಾರ್ಯದರ್ಶಿ ಡಾ. ವಸಂತ್ ಕುಮಾರ್ ಶೆಟ್ಟಿ, ರಾಜ್ಯಾಧ್ಯಕ್ಷೆ ಡಾ. ಕಾಂತಿ ಹರೀಶ್, ಗೌರವಾಧ್ಯಕ್ಷೆ ಆಗ್ನೇಸ್ ಕುಂದರ್, ಶ್ರೀ ಪ್ರಭಾಕರ್ ಅಮನ್ನ, ಶ್ರೀ ಹರೀಶ್ ಉಪಸ್ಥಿತರಿದ್ದರು.

Edited By : Vijay Kumar
Kshetra Samachara

Kshetra Samachara

03/12/2020 10:00 pm

Cinque Terre

3.6 K

Cinque Terre

0

ಸಂಬಂಧಿತ ಸುದ್ದಿ