ರಾಜ್ಯದಲ್ಲಿ ಹಿಜಾಬ್ ಹೋರಾಟಕ್ಕೆ ಕಾರಣವಾಗಿದ್ದ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿ SSLC ಮತ್ತು ಪಿಯು ಪರೀಕ್ಷೆಯಲ್ಲಿ ಸಾಕಷ್ಟು ವಿದ್ಯಾರ್ಥಿನಿಯರು ಗಮನಾರ್ಹ ಸಾಧನೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ SSLC ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿನಿಯರನ್ನು ಅಭಿನಂದಿಸುವ ಸಮಾರಂಭ ಏರ್ಪಡಿಸಲಾಗಿತ್ತು.
ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರೂ ಆದ ಶಾಸಕರಾದ ಕೆ ರಘುಪತಿ ಭಟ್ ಭಾಗವಹಿಸಿ SSLC ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿನಿಯರನ್ನು ಅಭಿನಂದಿಸಿದರು.
ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷರಾದ ಯಶ್ ಪಾಲ್ ಸುವರ್ಣ ಸಹಿತ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
04/06/2022 07:57 pm