ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಜಿಲ್ಲೆಯ SSLC ಸಾಧಕರಿಗೆ ಜಿಲ್ಲಾಡಳಿತದಿಂದ ಅಭಿನಂದನೆ

ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ 625ರ ಸಾಧನೆಯನ್ನು ಮಾಡಿದ ವಿದ್ಯಾರ್ಥಿಗಳಿಗೆ ಇಂದು ಸನ್ಮಾನ ಕಾರ್ಯಕ್ರಮ ಹಮ್ನಿಕೊಳ್ಳಲಾಗಿತ್ತು. ಸರಕಾರಿ ಪದವಿ ಪೂರ್ವ ಕಾಲೇಜು, ಮಲ್ಪೆಯ ಪುನೀತ್ ನಾಯಕ್, ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜು ಉಡುಪಿಯ ಗಾಯತ್ರಿ ಹಾಗೂ ಸರಕಾರಿ ಪ್ರೌಢಶಾಲೆ ಕಾಳಾವರ ಇಲ್ಲಿಯ ನಿಶಾ ಇವರಿಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳು ಸನ್ಮಾನ ಮಾಡಿ ಗೌರವಿಸಿದರು.

ವೈದ್ಯರಾಗುವ, ಐಎಎಸ್ ಮಾಡುವ ಕನಸುಗಳನ್ನು ಹೊತ್ತ ಈ ಪ್ರತಿಭಾವಂತ ಯುವ ಪ್ರತಿಭೆಗಳಿಗೆ ಸೂಕ್ತ ಮಾರ್ಗದರ್ಶನವನ್ನು ಜಿಲ್ಲಾಧಿಕಾರಿ ಕೂರ್ಮರಾವ್ ನೀಡಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ, ಉಪನಿರ್ದೇಶಕರು ಸಾರ್ವಜನಿಕ ಶಿಕ್ಷಣ ಇಲಾಖೆ ಗೋವಿಂದ ಮಡಿವಾಳ, ಜಾನ್ಹವಿ ಶಿಕ್ಷಣಾಧಿಕಾರಿಗಳು, ಡಾ. ಅಶೋಕ ಕಾಮತ್, ಕ್ಷೇತ್ರ ಶಿಕ್ಷಣಾಧಿಕಾರಿ ಈ ಸಂದರ್ಭ ಉಪಸ್ಥಿತರಿದ್ದರು.

Edited By :
Kshetra Samachara

Kshetra Samachara

20/05/2022 12:03 pm

Cinque Terre

9.45 K

Cinque Terre

0

ಸಂಬಂಧಿತ ಸುದ್ದಿ