ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ : ನೂತನ ರಾಷ್ಟ್ರೀಯ ಶಿಕ್ಷಣ ನೀತಿ ವಿಚಾರ ಸಂಕಿರಣ

ಉಡುಪಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿ ಐ.ಕ್ಯೂ.ಎ.ಸಿ. ಆಶ್ರಯದಲ್ಲಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿ 2020ರ ಕುರಿತಾಗಿ ಒಂದು ದಿನದ ವಿಚಾರ ಸಂಕಿರಣ ನಡೆಯಿತು.

ವಿಚಾರ ಸಂಕಿರಣಕ್ಕೆ ಚಾಲನೆಯಿತ್ತ ಪ್ರಾಂಶುಪಾಲ ಡಾ. ಸುರೇಶ್ ರೈ ಕೆ. ಮಾತನಾಡಿ, ವೃತ್ತಿ ಭವಿಷ್ಯ ರೂಪಿಸುವಲ್ಲಿ ಅತಿ ಮುಖ್ಯವಾದ ಪದವಿ ಶಿಕ್ಷಣದಲ್ಲಿ ಪ್ರಥಮ ಪದವಿಗೆ ಪ್ರವೇಶಾತಿ ಪಡೆದ ವಿದ್ಯಾರ್ಥಿಗಳು ನೂತನ ಶಿಕ್ಷಣ ನೀತಿಯ ಕುರಿತಾಗಿ ಸಮರ್ಪಕವಾಗಿ ತಿಳಿದುಕೊಳ್ಳುವ ಅವಶ್ಯಕತೆಯಿದೆ. ಪದವಿ ಶಿಕ್ಷಣ ಮುಂದಿನ ಉನ್ನತ ಶಿಕ್ಷಣಕ್ಕೂ ಅಡಿಪಾಯವಾಗಿದ್ದು, ವಿದ್ಯಾರ್ಥಿಗಳು ಆಸಕ್ತಿಯ ವಿಷಯಗಳನ್ನು ಆಯ್ಕೆ ಮಾಡಿಕೊಂಡು ಯಶಸ್ವಿಯಾಗುವಂತೆ ಹಾರೈಸಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ವಿಚಾರ ಸಂಕಿರಣ ನಡೆಸಿಕೊಟ್ಟರು. ಕಾವೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕ ಮನೋಜ್ ಲೂಯಿಸ್ ರಾಷ್ಟ್ರೀಯ ಶಿಕ್ಷಣ ನೀತಿಯ ಸಂಪೂರ್ಣ ವಿವರಗಳ ಜೊತೆಗೆ ವಿದ್ಯಾರ್ಥಿಗಳು ಇದನ್ನು ಯಾವ ರೀತಿಯಲ್ಲಿ ತಮ್ಮ ಭವಿಷ್ಯ ರೂಪಿಸಿಕೊಳ್ಳಬಹುದೆಂದು ವಿವರಿಸಿದರು. ಐಚ್ಚಿಕ ವಿಷಯಗಳಿಗೆ ಪೂರಕವಾಗಿರುವ ಮುಕ್ತ ಆಯ್ಕೆಯ ವಿಷಯಗಳು, ಕೌಶಲಗಳು, ಸಹಪಠ್ಯ ವಿಷಯಗಳು, ಕಡ್ಡಾಯ ವಿಷಯಗಳು, ಹಾಜರಾತಿ, ಫೀಲ್ಡ್ ವರ್ಕ್ ಪ್ರಾಜೆಕ್ಟ್ ವರ್ಕ್ ಇತ್ಯಾದಿ ವಿಷಯಗಳನ್ನು ಕೂಲಂಕುಶವಾಗಿ ವಿವರಿಸಿ ವಿದ್ಯಾರ್ಥಿಗಳ ಸಂದೇಹಗಳನ್ನು ಪರಿಹರಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರಾಧಾಕೃಷ್ಣ ಪ್ರಾಸ್ತಾವಿಕ ಮಾತುಗಳಲ್ಲಿ ವಿಚಾರ ಸಂಕಿರಣದ ಔಚಿತ್ಯ ತಿಳಿಸಿ ಸ್ವಾಗತಿಸಿದರು.ಐ.ಕ್ಯೂ.ಎ.ಸಿ. ಸಂಚಾಲಕಿ ಡಾ.ಮೇವಿ ಮಿರಾಂದ ವಂದಿಸಿದರು.

Edited By : PublicNext Desk
Kshetra Samachara

Kshetra Samachara

13/09/2022 02:10 pm

Cinque Terre

1.32 K

Cinque Terre

0

ಸಂಬಂಧಿತ ಸುದ್ದಿ