ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಶಾಸಕ ರಘುಪತಿ ಭಟ್ ನಿವಾಸದಲ್ಲಿ ಪರಿಶಿಷ್ಟ ಪಂಗಡದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಗೌರವ-ಸಂವಾದ

ಉಡುಪಿ: ಭಾರತೀಯ ಜನತಾ ಪಾರ್ಟಿ, ಉಡುಪಿ ನಗರ, ಎಸ್.ಟಿ ಮೋರ್ಚಾ ಉಡುಪಿ ನಗರ ಇದರ ಸಹಭಾಗಿತ್ವದಲ್ಲಿ ಸೇವೆ, ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ 2022ನೇ ಸಾಲಿನಲ್ಲಿ ನಗರ ಮಂಡಲ ವ್ಯಾಪ್ತಿಯ ಶಾಲೆಗಳಲ್ಲಿ ಎಸ್.ಎಸ್.ಎಲ್. ಸಿ. ಪರೀಕ್ಷೆಯಲ್ಲಿ ಶೇಕಡ 90 ಕ್ಕಿಂತ ಹೆಚ್ಚು ಅಂಕಗಳಿಸಿದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಗೌರವಿಸುವ ಕಾರ್ಯಕ್ರಮ ಇಂದು ದಿನಾಂಕ ಶಾಸಕ ಕೆ ರಘುಪತಿ ಭಟ್ ಅವರ ಸ್ವಗೃಹದಲ್ಲಿ ನಡೆಯಿತು.

ಶಾಸಕರಾದ ಕೆ. ರಘುಪತಿ ಭಟ್ ವಿದ್ಯಾರ್ಥಿಗಳನ್ನು ಗೌರವಿಸಿ ಅಭಿನಂದನೆ ಸಲ್ಲಿಸಿ ಬಳಿಕ ಅವರೊಂದಿಗೆ ಉಪಹಾರ ಸವಿಯುತ್ತಾ ಸಂವಾದ ನಡೆಸಿದರು.ಉಡುಪಿ ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

Edited By : PublicNext Desk
Kshetra Samachara

Kshetra Samachara

12/06/2022 05:29 pm

Cinque Terre

4.13 K

Cinque Terre

0

ಸಂಬಂಧಿತ ಸುದ್ದಿ