ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಾಪುರ: ಎಚ್ ಎಮ್ ಎಮ್ ಮತ್ತು ವಿ ಕೆ ಆರ್ ನಲ್ಲಿ ಹದಿಹರೆಯದ ಶಿಕ್ಷಣ ಮಾಹಿತಿ ಕಾರ್ಯಾಗಾರ

ಕುಂದಾಪುರ : ಇಲ್ಲಿನ ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್ ಎಮ್ ಎಮ್ ಮತ್ತು ವಿ ಕೆ ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ 6ರಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ಹದಿಹರೆಯದ ಶಿಕ್ಷಣ ಮಾಹಿತಿ ಕಾರ್ಯಾಗಾರ ಜರುಗಿತು.

ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ತಲ್ಲೂರಿನ ಅಶ್ವಿನಿ ಕ್ಲಿನಿಕ್ ನ ಪ್ರಸಿದ್ಧ ವೈದ್ಯರಾಗಿರುವ ಡಾ. ರವೀಂದ್ರ ಆಗಮಿಸಿದ್ದರು. ಅವರು ಮಾತನಾಡಿ ಹದಿಹರೆಯದಲ್ಲಿ ಆಗುವ ದೈಹಿಕ ಮತ್ತು ಮಾನಸಿಕ ಬದಲಾವಣೆಗಳು, ಮಾನಸಿಕ ಒತ್ತಡ, ಹದಿಹರೆಯದ ಸಮಸ್ಯೆಗಳು ಮತ್ತು ಅದನ್ನು ಪರಿಹರಿಸಿಕೊಳ್ಳಬಹುದಾದ ವಿಧಾನಗಳು, ವೈಯಕ್ತಿಕ ಆರೋಗ್ಯ ಮತ್ತು ನೈರ್ಮಲ್ಯದ ಕುರಿತು ವಿದ್ಯಾರ್ಥಿಗಳಿಗೆ ಬಹಳ ಅತ್ಯುತ್ತಮವಾದ ಮಾಹಿತಿಯನ್ನು ನೀಡಿದರು.

ಕಾರ್ಯಕ್ರಮದ ಸಂಯೋಜಕರಾದ ಪ್ರಾಥಮಿಕ ಶಾಲಾ ಸಹಾಯಕ ಮುಖ್ಯ ಶಿಕ್ಷಕಿ ಕವಿತಾ ಭಟ್ ವ್ಯಕ್ತಿಯನ್ನು ಸಭೆಗೆ ಪರಿಚಯಿಸಿದರು. ಮುಖ್ಯಶಿಕ್ಷಕ ಜಗದೀಶ್ ಆಚಾರ್ ಸಾಸ್ತಾನ ಸ್ಮರಣಿಕೆಯನ್ನು ನೀಡಿ ಗೌರವಿಸಿದರು. ಸಂಸ್ಥೆಯ ಪ್ರಾಂಶುಪಾಲೆ ಚಿಂತನಾ ರಾಜೇಶ್, ಉಪಪ್ರಾಂಶುಪಾಲೆ ಮತ್ತು ಪ್ರೌಢಶಾಲಾ ಮುಖ್ಯ ಶಿಕ್ಷಕಿ ಶುಭ ಕೆ ಎನ್ ಮತ್ತು ಇನ್ನಿತರ ಶಿಕ್ಷಕರು ಮತ್ತು ಎಲ್ಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಪ್ರಾಥಮಿಕ ಶಾಲಾ ಶಿಕ್ಷಕ ವಿನೋದ್ ವಂಡಾರ್ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

Edited By : PublicNext Desk
Kshetra Samachara

Kshetra Samachara

30/06/2022 04:17 pm

Cinque Terre

1.22 K

Cinque Terre

0

ಸಂಬಂಧಿತ ಸುದ್ದಿ