ಉಡುಪಿ: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳು ಆಗಸ್ಟ್ 12ರಿಂದ 25 ರವರೆಗೆ ನಗರದ ಸರಕಾರಿ ಪದವಿ ಪೂರ್ವ ಕಾಲೇಜು ಹಾಗೂ ಎಂಜಿಎಂ ಪದವಿ ಪೂರ್ವ ಕಾಲೇಜು, ಕಾರ್ಕಳದ ಶ್ರೀಭುವನೇಂದ್ರ ಪದವಿ ಪೂರ್ವ ಕಾಲೇಜು ಮತ್ತು ಕುಂದಾಪುರದ ಭಂಡಾರ್‌ಕಾರ್ಸ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿವೆ.
ಪರೀಕ್ಷೆಗಳು ಮುಕ್ತಾಯವಾಗುವರೆಗೆ ಸಂಬಂಧಿಸಿದ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಿಸ್ತು ಮತ್ತು ಶಾಂತಿಯನ್ನು ಕಾಪಾಡುವ ಸಲುವಾಗಿ ಹಾಗೂ ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ಸಲುವಾಗಿ ನಿಗದಿಪಡಿಸಿದ ಪರೀಕ್ಷಾ ಕೇಂದ್ರಗಳ ಸುತ್ತಲೂ 200ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಸೆಕ್ಷನ್ 144(1) ರಂತೆ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶ ಹೊರಡಿಸಿದ್ದಾರೆ.
Kshetra Samachara
06/08/2022 07:43 pm