ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ವಿದ್ಯಾರ್ಥಿ ನಿಲಯಗಳಲ್ಲಿ ಶೇ.25ರಷ್ಟು ಪ್ರವೇಶಾವಕಾಶ ಹೆಚ್ಚಳ: ಸಚಿವ ಕೋಟ

ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರವೇಶ ಒದಗಿಸುವ ಉದ್ದೇಶದಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಲ್ಲಿ ಶೇ.25ರಷ್ಟು ಪ್ರವೇಶಾವಕಾಶವನ್ನು ಹೆಚ್ಚಿಸಲಾಗುತ್ತಿದೆ ಎಂದು ರಾಜ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಇದರಿಂದ ಈವರೆಗೆ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶ ಸಿಗದೆ ಸಂಕಷ್ಟ ಎದುರಿಸುತ್ತಿದ್ದ ರಾಜ್ಯದ ಸುಮಾರು 25 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಇತಿಹಾಸದಲ್ಲೇ ಇದೊಂದು ಮಹತ್ವದ ಹೆಜ್ಜೆಯಾಗಿದ್ದು, ಸುಮಾರು 250 ಹೊಸ ವಿದ್ಯಾರ್ಥಿ ನಿಲಯಗಳನ್ನು ತೆರೆಯುವ ಆರ್ಥಿಕ ಹೊರೆಯನ್ನು ಇದರಿಂದ ತಪ್ಪಿಸಲಾಗಿದೆ ಎಂದೂ ಅವರು ಹೇಳಿದ್ದಾರೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳಿಗೆ ಶೇ.25ರಷ್ಟು ಪ್ರವೇಶಾವಕಾಶ ಹೆಚ್ಚಿಸುವ ಹಾಗೂ ಇದರಿಂದ ಉಂಟಾಗುವ ಹೆಚ್ಚುವರಿ ವೆಚ್ಚವನ್ನು ವಿದ್ಯಾಸಿರಿ ಯೋಜನೆಗೆ ಒದಗಿಸುವ ಅನುದಾನದಿಂದ ಬಳಸಿಕೊಳ್ಳುವ ಇಲಾಖೆಯ ಪ್ರಸ್ತಾವನೆಗೆ ಆರ್ಥಿಕ ಇಲಾಖೆ ಅನುಮೋದನೆ ನೀಡಿದ್ದು ಈ ಯೋಜನೆಯನ್ನು ಪ್ರಸಕ್ತ ಸಾಲಿನಲ್ಲಿಯೇ ಅನುಷ್ಠಾನಗೊಳಿಸಲಾಗುವುದು ಎಂದು ಅವರು ವಿವರಿಸಿದರು.

ಈ ಪ್ರಸ್ತಾವನೆಯ ಅನುಷ್ಠಾನಕ್ಕೆ 54.20 ಕೋಟಿ ರೂ. ಅನುದಾನ ಬೇಕಾಗಿದ್ದು, ತುರ್ತಾಗಿ 7.50 ಕೋಟಿ ರೂ ಅನುದಾನ ಒದಗಿಸುವಂತೆ ಹಾಗೂ ಸಂಖ್ಯಾಬಲ ಹೆಚ್ಚಳದ ಜೊತೆಯಲ್ಲಿಯೇ ಅಗತ್ಯವಿರುವ 190 ಅಡುಗೆಯವರು, 328 ಅಡುಗೆ ಸಹಾಯಕರು ಸೇರಿ ಒಟ್ಟು 518 ಹುದ್ದೆಗಳನ್ನು ಸೃಜಿಸಲು ಕೋರಲಾಗಿತ್ತು ಎಂದರು. ಇದೀಗ ಆರ್ಥಿಕ ಇಲಾಖೆ ಪ್ರಸ್ತಾವನೆಗೆ ಸಹಮತಿ ನೀಡಿರುವುದರಿಂದ ಅನುಷ್ಠಾನ ಕಾರ್ಯ ಶೀಘ್ರವೇ ಅಗಲಿದೆ ಎಂದು ತಿಳಿಸಿದ ಅವರು, ಈ ಪ್ರಸ್ತಾವನೆಯನ್ನು ಅನುಮೋದಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೃತಜ್ಞತೆ ಸಲ್ಲಿಸಿದರು.

Edited By : PublicNext Desk
Kshetra Samachara

Kshetra Samachara

14/09/2022 09:07 pm

Cinque Terre

1.52 K

Cinque Terre

0

ಸಂಬಂಧಿತ ಸುದ್ದಿ