ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಟ: ಪಾರಂಪಳ್ಳಿಯಲ್ಲಿ ಕೆಮ್ಮಣ್ಣು ಕೆರೆ ಹಸ್ತಾಂತರ !

ಕೋಟ :ಗ್ರಾಮಾಭಿವೃದ್ಧಿ ಯೋಜನೆಯ ನಮ್ಮೂರು ನಮ್ಮ ಕೆರೆ ಯೋಜನೆಯಿಂದ ಕೆರೆಗಳ ಅಭಿವೃದ್ಧಿಯಾಗಿ ಪರಿಸರದ ಅಂತರ್ಜಲ ವೃದ್ಧಿಯಾಗುತ್ತಿದ್ದು, ನೀರಿನ ಸಮಸ್ಯೆಗೆ ಪರಿಹಾರ ಸಿಕ್ಕಿದೆ ಎಂದು ಕೋಟದ ಉದ್ಯಮಿ ಆನಂದ ಸಿ.ಕುಂದರ್‌ ಹೇಳಿದರು.

ಅವರು ಗ್ರಾಮಾಭಿವೃದ್ಧಿ ಯೋಜನೆಯ ನಮ್ಮೂರು-ನಮ್ಮ ಕೆರೆ ಯೋಜನೆಯಡಿ ಸಾಲಿಗ್ರಾಮ ಪಾರಂಪಳ್ಳಿಯಲ್ಲಿ ಅಭಿವೃದ್ಧಿ ಗೊಂಡ ಕೆಮ್ಮಣ್ಣು ಕೆರೆ ಹಸ್ತಾಂತರ ಕಾರ್ಯ ಕ್ರಮದಲ್ಲಿ ಮಾತನಾಡಿದರು. ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಗಣೇಶ್‌ ಬಿ. ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ರಾಜ್ಯಾದ್ಯಂತ ಇದುವರೆಗೆ 485 ಕೆರೆಗಳನ್ನು ಅಭಿವೃದ್ಧಿಪಡಿಸಲಾಗಿದೆ.

36 ಕೋಟಿ ರೂ.ಗೂ ಅಧಿಕ ಹಣವನ್ನು ಇದಕ್ಕೆ ವಿನಿಯೋಗ ಮಾಡಲಾಗಿದೆ. ಉಡುಪಿ ಜಿಲ್ಲೆಯಲ್ಲಿ ಇದುವರೆಗೆ 13 ಕೆರೆಗಳನ್ನು ಅಭಿವೃದ್ಧಿಪಡಿಸಿ, ಸಮಿತಿಯನ್ನು ರಚಿಸಿ ಸಾರ್ವಜನಿಕರ ಉಪಯೋಗಕ್ಕೆ ಹಸ್ತಾತರಿಸಲಾಗಿದೆ ಎಂದರು. ಯೋಜನೆಯ ಕೋಟ ವಲಯದ ಮೇಲ್ವಿಚಾರಕಿ ಸುಲೋಚನಾ ಸ್ವಾಗತಿಸಿದರು. ಕೃಷಿ ಅಧಿಕಾರಿ ರಾಜೇಂದ್ರ ನಿರೂಪಿಸಿದರು. ಆಂತರಿಕ ಲೆಕ್ಕಪರಿಶೋಧಕ ಮಂಜುನಾಥ ವಂದಿಸಿದರು.

Edited By : PublicNext Desk
Kshetra Samachara

Kshetra Samachara

28/04/2022 04:21 pm

Cinque Terre

814

Cinque Terre

0