ಮಂದಾರ್ತಿ:2025ರ ಹೊತ್ತಿಗೆ ನಮ್ಮ ದೇಶವನ್ನು ಕ್ಷಯಮುಕ್ತ ಮಾಡುವ ಸಂಕಲ್ಪ ಹೊಂದಲಾಗಿದ್ದು ಈ ನಿಟ್ಟಿನಲ್ಲಿ ಗ್ರಾಮೀಣ ಹಂತದಿಂದಲೇ ಸಂಘಟಿತ ಪ್ರಯತ್ನಗಳು ಅಗತ್ಯವಿದೆ ಎಂದು ಉಡುಪಿ ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಚಿದಾನಂದ ಸಂಜು ತಿಳಿಸಿದ್ದಾರೆ.
ಕಾಡೂರು ಗ್ರಾಮ ಪಂಚಾಯತ್ ನಲ್ಲಿ "ಕ್ಷಯಮುಕ್ತ ಗ್ರಾಮಕ್ಕಾಗಿ ಕ್ಷಯರೋಗ ಪತ್ತೆ ಆಂದೋಲನ" ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ವೈಯಕ್ತಿಕ ಜಾಗೃತಿ ಹಾಗೂ ವ್ಯವಸ್ಥಿತ ವೈದ್ಯಕೀಯ ಮೇಲ್ವಿಚಾರಣೆಗೆ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು.
ಮಂದಾರ್ತಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಅನಿಲ್ ಕುಮಾರ್ ಅವರು ಮಾತನಾಡಿ ನಡೂರು ಗ್ರಾಮದ ಮೂಲಕ ಸಮೀಕ್ಷೆಯನ್ನು ಆರಂಭಿಸಲಿಗುತ್ತಿದ್ದು ಆಶಾ ಕಾರ್ಯಕರ್ತರು,ಕಿರಿಯ ಆರೋಗ್ಯ ಸಹಾಯಕರು,ಎಸ್ ಟಿ ಎಸ್ .ಎಸ್ ಟಿ ಎಲ್ ಎಸ್ , ಪಿಪಿಎಂಓ ಹಾಗೂ ಪಂಚಾಯತ್ ಸದಸ್ಯರು ಮತ್ತು ಸಿಬ್ಬಂದಿಯವರ ಸಹಕಾರ ಪಡೆದು ಅನುಷ್ಠಾನ ಮಾಡಲಾಗುವುದು ಎಂದು ತಿಳಿಸಿದರು.
ಕಾಡೂರು ಗ್ರಾಮ ಪಂಚಾಯತ್ ಅಧ್ಯಕ್ಷ ಪಾಂಡುರಂಗ ಶೆಟ್ಟಿ ಅವರು ಮಾತನಾಡಿ ಪಂಚಾಯತ್ ವ್ಯಾಪ್ತಿಯಲ್ಲಿ ಎಲ್ಲಾ ಇಲಾಖೆಗಳ ಕೆಲಸ ಕಾರ್ಯಗಳು ಉತ್ತಮವಾಗಿ ನಿರ್ವಹಣೆ ಆಗುತ್ತಿದ್ದು, ಕೋವಿಡ್ ನಿರ್ವಹಣೆಯನ್ನು ವ್ಯವಸ್ಥಿತವಾಗಿ ನಿರ್ವಹಿಸಿದ ಮಾದರಿಯಲ್ಲಿ "ಕ್ಷಯಮುಕ್ತ ಗ್ರಾಮ" ಪರಿಕಲ್ಪನೆಯನ್ನು ಅನುಷ್ಠಾನ ಮಾಡಬೇಕೆಂದು ತಿಳಿಸಿದರು.
ಕಾಡೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಹೇಶ್. ಕೆ ಮಾತನಾಡಿ ಸಮೀಕ್ಷೆಯಲ್ಲಿ ಮಾಹಿತಿಯನ್ನು ಸಂಗ್ರಹ ಮಾಡುವುದರೊಂದಿಗೆ ಮಧುಮೇಹ, ಹೆಚ್ಐವಿ,ಮತ್ತು ಎನ್ ಟಿ ಪಿ ಸಿ ಪರೀಕ್ಷೆ, ಆಪ್ತಸಮಾಲೋಚನೆಯ ಉದ್ದೇಶವನ್ನು ಹೊಂದಿರುವುದರಿಂದ ನಾಗರಿಕರು ಈ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಕಾಡೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಅಮಿತಾ,ಪಂಚಾಯತ್ ಸದಸ್ಯರು, ಕೋಟ ಆಸ್ಪತ್ರೆಯ ಎನ್ ಸಿ ಡಿ ವಿಭಾಗದ ವೈದ್ಯಾಧಿಕಾರಿ ಡಾ.ಸ್ನೇಹ. ಮೇಲ್ವಿಚಾರಕರಾದ ಸುರೇಶ್, ಪ್ರಸಾದ್ ಶೆಟ್ಟಿ, ಆಶಾ ಕಾರ್ಯಕರ್ತರು, ಪಂಚಾಯತ್ ಸಿಬ್ಬಂದಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
Kshetra Samachara
30/07/2021 04:40 pm