ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಗೆ ಟೆಂಡರ್ ಪ್ರಕ್ರಿಯೆ.

ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಖಾಸಗಿಯಾಗಿ ಪಿಪಿಪಿ ಮಾದರಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅನುಷ್ಠಾನಗೊಳಿಸಲು ಈಗಾಗಲೇ ಡಿಪಿಆರ್ ಸಿದ್ಧಪಡಿಸಿ ಟೆಂಡರ್ ಪ್ರಕ್ರಿಯೆ ನಡೆಸಲು ಸರ್ಕಾರದಿಂದ ಅನುಮೋದನೆ ಪಡೆಯಲು ನಗರಸಭೆಯ ಸಾಮಾನ್ಯ ಸಭೆಯಲ್ಲಿ ನಿರ್ಣಯ ಕೈಗೊಂಡು ಮುಂದಿನ ಕ್ರಮಕ್ಕಾಗಿ ಸರ್ಕಾರಕ್ಕೆ ಸಲ್ಲಿಸಲಾಗಿದ್ದರೂ ಅನುಮೋದನೆ ನೀಡದೇ ಇರುವ ಬಗ್ಗೆ ಶಾಸಕ ಶ್ರೀ ಕೆ. ರಘುಪತಿ ಭಟ್ ಸದನದಲ್ಲಿ ಪ್ರಶ್ನೋತ್ತರ ವೇಳೆ ಚರ್ಚಿಸಿದರು.

ಉಡುಪಿ ನಗರದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಸರಕಾರಕ್ಕೆ ಯಾವುದೇ ಆರ್ಥಿಕ ಹೊರೆ ಇರದೆ ಪಿಪಿಪಿ ಮಾದರಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯನ್ನು ಅನುಷ್ಠಾನಗೊಳಿಸಲು ಶಾಸಕರ ಹಾಗೂ ಸಚಿವರ ನೇತೃತ್ವದಲ್ಲಿ ಸರ್ಕಾರದ ಮಟ್ಟದಲ್ಲಿ ಸಭೆ ನಡೆಸಿ ನಿರ್ಣಯಿಸಿ ಯೋಜನೆಗೆ ಶೀಘ್ರವಾಗಿ ಅನುಮೋದನೆ ನೀಡಲು ತಿಳಿಸಿದರು.

Edited By : Nirmala Aralikatti
Kshetra Samachara

Kshetra Samachara

06/02/2021 10:37 am

Cinque Terre

8.03 K

Cinque Terre

3

ಸಂಬಂಧಿತ ಸುದ್ದಿ