ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ವಿಶ್ವ ಪ್ರವಾಸೋದ್ಯಮ ದಿನ ಆಚರಣೆ

ಉಡುಪಿ: ಜಿಲ್ಲಾಡಳಿತ ಉಡುಪಿ ಪ್ರವಾಸೋದ್ಯಮ ಇಲಾಖೆ ಉಡುಪಿ, ಮಲ್ಪೆ ಅಭಿವೃದ್ಧಿ ಸಮಿತಿ, ಕರಾವಳಿ ಪ್ರವಾಸೋದ್ಯಮ ಸಂಘಟನೆ (ACT) ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ಇಂದು ಅಟಲ್ ಬಿಹಾರಿ ವಾಜಪೇಯಿ ಸಭಾಂಗಣ, ರಜತಾದ್ರಿ, ಮಣಿಪಾಲದಲ್ಲಿ ನಡೆದ "ವಿಶ್ವ ಪ್ರವಾಸೋದ್ಯಮ ದಿನಾಚರಣೆ 2021-22" ಕಾರ್ಯಕ್ರಮದಲ್ಲಿ ಶಾಸಕರಾದ ಕೆ. ರಘುಪತಿ ಭಟ್ ರವರು ಭಾಗವಹಿಸಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.

ಈ ಸಂದರ್ಭದಲ್ಲಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಘವೇಂದ್ರ ಕಿಣಿ, ಉಡುಪಿ ನಗರಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಕರಾವಳಿ ಪ್ರವಾಸೋದ್ಯಮ ಸಂಘಟನೆ ಉಡುಪಿಯ ಅಧ್ಯಕ್ಷರಾದ ಮನೋಹರ್ ಶೆಟ್ಟಿ, ಕೆ.ಎಂ.ಸಿ ಮಣಿಪಾಲದ ಮೂಳೆ ಚಿಕಿತ್ಸೆ ವಿಭಾಗದ ಉಪನ್ಯಾಸಕರು ಮುಖ್ಯಸ್ಥರಾದ ಕಿರಣ್ ಕೆ.ವಿ ಆಚಾರ್ಯ ಹಾಗೂ ಜಿಲ್ಲಾಧಿಕಾರಿಗಳಾದ ಕೂರ್ಮಾ ರಾವ್ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ನವೀನ್ ಭಟ್ ವೈ, ಉಡುಪಿ ನಗರ ಸಭೆಯ ಪೌರಾಯುಕ್ತರಾದ ಉದಯ್ ಶೆಟ್ಟಿ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರಾದ ಕ್ಲಿಫರ್ಡ್ ಲೋಬೋ ಮತ್ತು ಪ್ರಮುಖರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

27/09/2021 11:42 am

Cinque Terre

942

Cinque Terre

0

ಸಂಬಂಧಿತ ಸುದ್ದಿ