ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಾಪುರ: ನಾಳೆ (ಸೆ.17) ಹಳ್ಳಿಹೊಳೆಯಲ್ಲಿ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ

ಕುಂದಾಪುರ: ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ. ಅವರು ಸೆ. 17ರಂದು ಬೆಳಗ್ಗೆ 10 ಗಂಟೆಯಿಂದ ಬೈಂದೂರು ತಾಲೂಕಿನ ಹಳ್ಳಿಹೊಳೆ ಗ್ರಾ.ಪಂ. ವ್ಯಾಪ್ತಿಯ ಶೆಟ್ಟಿಪಾಲ್ ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ಗ್ರಾಮ ವಾಸ್ತವ್ಯ ಹೂಡಲಿದ್ದಾರೆ. ಅವರೊಂದಿಗೆ ತಹಶೀಲ್ದಾರರು ಹಾಗೂ ವಿವಿಧ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದು, ಪಂಚಾಯತ್‌ ವ್ಯಾಪ್ತಿಗೆ ಸಂಬಂಧಿಸಿದ ಸಾರ್ವಜನಿಕರ ಸಮಸ್ಯೆ, ಅಹವಾಲುಗಳನ್ನು ಸಲ್ಲಿಸಬಹುದು ಎಂದು ಬೈಂದೂರು ತಹಶೀಲ್ದಾರ್ ಶ್ರೀಕಾಂತ್ ಎಸ್. ಹೆಗ್ಡೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

16/09/2022 12:12 pm

Cinque Terre

1.57 K

Cinque Terre

0

ಸಂಬಂಧಿತ ಸುದ್ದಿ