ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾರ್ಕಳ: 'ಗ್ರಾಮಮಟ್ಟದ ಸಮಸ್ಯೆಗಳು ಸ್ಥಳದಲ್ಲೇ ಪರಿಹಾರ ಸರಕಾರದ ಆದ್ಯತೆ'

ಕಾರ್ಕಳ: ಗ್ರಾಮೀಣ ಭಾಗದ ಸಮಸ್ಯೆಗಳನ್ನು ಆಲಿಸಲು ಹಾಗೂ ಪರಿಹರಿಸಲು ಸರಕಾರವು ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಜಾರಿಗೆ ತಂದಿದೆ ಅಧಿಕಾರಿಗಳು ಗ್ರಾಮಗಳಿಗೆ ಬಂದು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಈ ಕಾರ್ಯಕ್ರಮದ ಸದುಪಯೋಗ ಪಡಿಸಿಕೊಳ್ಳಬೇಕೆಂದು ಕಾರ್ಕಳ ತಹಶಿಲ್ದಾರ್ ಪ್ರದೀಪ್ ಕುರ್ಡೆಕರ್ ಹೇಳಿದರು.

ಅವರು ಶನಿವಾರ ಕಾರ್ಕಳ ತಾಲೂಕಿನ ನಲ್ಲೂರು ಗ್ರಾಮದ ಬಿರಾಲುಪೇಟೆಯ ಮಹಾಗಣಪತಿ ಭಜನಾ ಮಂದಿರದಲ್ಲಿ ನಡೆದ ತಹಶಿಲ್ದಾರ್ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು .

ನಲ್ಲೂರು ಗ್ರಾ ಪಂ ಅಧ್ಯಕ್ಷೆ ಕವಿತಾ ಅಧ್ಯಕ್ಷೆ ವಹಿಸಿದ್ದರು. ಸಭೆಯಲ್ಲಿ ತಾ.ಪಂ ಕಾರ್ಯನಿರ್ವಹಣಾಧಿಕಾರಿ ಗುರುದತ್ , ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಶ್ರೀನಿವಾಸ್ ಬಿ.ವಿ, ಉಪತಹಶಿಲ್ದಾರ್ ಮಂಜುನಾಥ್ ನಾಯಕ್ , ಕಾರ್ಕಳ ತಾಲೂಕು ವೈದ್ಯಾಧಿಕಾರಿ ಡಾ. ಕೃಷ್ಣಾನಂದ ಶೆಟ್ಟಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಸಭೆಯಲ್ಲಿ ಒಟ್ಟು 54 ಅರ್ಜಿಗಳು ಸಲ್ಲಿಕೆಯಾಗಿದ್ದು ಈ ಪೈಕಿ 17 ಅರ್ಜಿಗಳನ್ನು ಸ್ಥಳದಲ್ಲಿ ಇತ್ಯರ್ಥಪಡಿಸಲಾಯಿತು. ಪಿಂಚಣಿ ಯೋಜನೆಯಲ್ಲಿ ಸಂಧ್ಯಾ ಸುರಕ್ಷಾ,ವಿಧವಾ ವೇತನ,ವೃದ್ಧಾಪ್ಯ ವೇತನ ಸೇರಿ 16 ಫಲಾನುಭವಿಗಳಿಗೆ ಪಿಂಚಣಿ ಅದೇಶ ಪತ್ರ ವಿತರಿಸಲಾಯಿತು.

Edited By : PublicNext Desk
Kshetra Samachara

Kshetra Samachara

18/09/2022 04:23 pm

Cinque Terre

764

Cinque Terre

0

ಸಂಬಂಧಿತ ಸುದ್ದಿ