ಉಡುಪಿ: ಮೀನುಗಾರರು ಸರಕಾರದ ವಿವಿಧ ಸೌಲಭ್ಯಗಳನ್ನು ಪಡೆಯುವಲ್ಲಿ ಇರುವ ತೊಡಕುಗಳನ್ನು ನಿವಾರಿಸುವುದು, ಅವರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವುದು ಹಾಗೂ ಮಲ್ಪೆ ಬಂದರಿನಲ್ಲಿ ಸಮರ್ಪಕ ವ್ಯವಸ್ಥೆ ಕಲ್ಪಿಸುವುದು ಮತ್ತು ಮಲ್ಪೆ ಯಾಂತ್ರಿಕ(ಟ್ರಾಲ್) ದೋಣಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ ನಿಯಮಿತ ಮಲ್ಪೆ ಹಾಗೂ ಮಲ್ಪೆ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ ನಿಯಮಿತ ಮಲ್ಪೆ ಇವರ ಬೇಡಿಯನ್ನು ಈಡೇರಿಸುವಂತೆ ಶಾಸಕ ಕೆ ರಘುಪತಿ ಭಟ್ ಅವರ ನೇತೃತ್ವದಲ್ಲಿ ಮಲ್ಪೆ ಮೀನುಗಾರರ ಸಂಘ ಇದರ ಪದಾಧಿಕಾರಿಗಳು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್ ಅಂಗಾರ ಅವರನ್ನು ಇಂದು ಬೆಂಗಳೂರಿನಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದರು.ಈ ಬಗ್ಗೆ ಸಭೆಯಲ್ಲಿ ಚರ್ಚಿಸಿ ತಕ್ಷಣ ಸೂಕ್ತ ಕ್ರಮ ಕೈಗೊಳ್ಳಲು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್ ಅಂಗಾರ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಮೀನುಗಾರಿಕಾ ಇಲಾಖೆ ನಿರ್ದೇಶಕರಾದ ರಾಮಾಚಾರಿ, ಉಪ ನಿರ್ದೇಶಕರಾದ ತಿಪ್ಪೇಸ್ವಾಮಿ ಹಾಗೂ ಇತರ ಅಧಿಕಾರಿಗಳು ಮತ್ತು ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷರಾದ ದಯಾನಂದ ಸುವರ್ಣ, ಆಳ ಸಮುದ್ರ ಸಂಘದ ಅಧ್ಯಕ್ಷರಾದ ಸುಭಾಷ್ ಮೆಂಡನ್, ಯಾಂತ್ರಿಕ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷರಾದ ರಾಮಚಂದ್ರ ಕುಂದರ್, ಪ್ರಾಥಮಿಕ ಸಹಕಾರಿ ಸಂಘದ ಅಧ್ಯಕ್ಷರಾದ ಸತೀಶ್ ಕುಂದರ್ ಮಲ್ಪೆ, ಮಲ್ಪೆ ಮೀನುಗಾರರ ಸಂಘದ ಕೋಶಾಧಿಕಾರಿ ಕರುಣಾಕರ ಸಾಲ್ಯಾನ್ ಉಪಸ್ಥಿತರಿದ್ದರು.
Kshetra Samachara
22/09/2022 05:23 pm