ಉಡುಪಿ: ಕೋವಿಡ್ 19 ನಿಂದ ಜಿಲ್ಲೆಯಲ್ಲಿ ಮರಣ ಹೊಂದಿರುವವರ ಪ್ರಮಾಣ ಅತ್ಯಂತ ಕಡಿಮೆಯಾಗಿದ್ದು, ಇಡೀ ರಾಜ್ಯದಲ್ಲಿ ಈ ಸಾಧನೆ ಮಾಡಿರುವ 3 ಜಿಲ್ಲೆಗಳಲ್ಲಿ ಉಡುಪಿ ಒಂದಾಗಿದೆ. ಆದರೆ, ಉಳಿದ 2 ಜಿಲ್ಲೆಗಳಲ್ಲಿ ಅತ್ಯಂತ ವಿಷಮ ಪರಿಸ್ಥಿತಿಯಲ್ಲಿ, ಸಾವಿನ ದವಡೆಯಲ್ಲಿದ್ದ ರೋಗಿಗಳನ್ನು , ಬೇರೆಡೆ ಸ್ಥಳಾಂತರಿಸಿ ಚಿಕಿತ್ಸೆ ನೀಡಿದ್ದು, ಉಡುಪಿ ಜಿಲ್ಲೆಯಲ್ಲಿ ಅಂತಹ ರೋಗಿಗಳಿಗೆ, ಇಲ್ಲೇ ಚಿಕಿತ್ಸೆ ನೀಡಿ ಜೀವ ಉಳಿಸುವಲ್ಲಿ ಯಶಸ್ವಿಯಾಗಿದ್ದೇವೆ. ಇದಕ್ಕೆ ಮುಖ್ಯ ಕಾರಣ ಜಿಲ್ಲೆಯ ಕೋವಿಡ್ ಫ್ರಂಟ್ಲೈನ್ ವಾರಿಯರ್ಸ್ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು.
ಉಡುಪಿಯ ಶ್ಯಾಮಿಲಿ ಸಭಾಂಗಣದಲ್ಲಿ ಮಾತನಾಡಿದ ಅವರು, ಜಿಲ್ಲೆಯ ಕೋವಿಡ್ ಫ್ರಂಟ್ಲೈನ್ ವಾರಿಯರ್ಸ್, ತಮ್ಮ ಕ್ಷೇತ್ರಗಳಲ್ಲಿ ಯಾವುದೇ ಒತ್ತಡಗಳಿಗೆ ಒಳಗಾಗದೇ, ಮನೋಸ್ಥೆರ್ಯದಿಂದ ಕೆಲಸ ಮಾಡಿದರು ಎಂದರು.
ಜಿಲ್ಲೆಯಲ್ಲಿ ಕೋವಿಡ್ ಫ್ರಂಟ್ಲೈನ್ ವಾರಿರ್ಸ್ ಗಳಾಗಿ, ಸರ್ಕಾರಿ ವೈದ್ಯರು, ಆರೋಗ್ಯ ಇಲಾಖೆಯ ಅಧಿಕಾರಿಗಳು,ವಿವಿಧ ಇಲಾಖೆಯ ಅಧಿಕಾರಿಗಳು , ಜಿಲ್ಲಾ ಎಕ್ಸ್ಪರ್ಟ್ ತಂಡದ ವೈದ್ಯರುಗಳು , ತಹಸೀಲ್ದಾರ್ ಗಳು, ಕಾರ್ಯ ನಿರ್ವಹಣಾಧಿಕಾರಿಗಳು ಕಾರ್ಯ ನಿರ್ವಹಿಸುತ್ತಿದ್ದು, ತಮಗೆ ವಹಿಸಲಾದ ಜವಾಬ್ದಾರಿ ಅತ್ಯಂತ ಯಶಸ್ವಿಯಾಗಿ ನಿರ್ವಹಿಸಿ, ರೋಗಿಗಳ ಜೀವ ಉಳಿಸಲು ಆದ್ಯತೆ ನೀಡಿದ್ದರಿಂದ ಜಿಲ್ಲೆಯಲ್ಲಿ ಕೋವಿಡ್ ಮರಣ ಪ್ರಮಾಣ ಕಡಿಮೆಯಾಗಿದೆ. ಇದಕ್ಕೆ ಇವರೆಲ್ಲರ ಪರಿಶ್ರಮವೇ ಕಾರಣ, ಅಲ್ಲದೇ ಕೊರೋನಾ ವಾರಿಯರ್ಸ್ ಗಳ ಸುರಕ್ಷತೆಗೆ ಸಹ ಹೆಚ್ಚಿನ ಮುಂಜಾಗ್ರತೆ ವಹಿಸಿದ್ದು, ಇದುವರೆಗೆ ಕೊರೋನಾ ವಾರಿಯರ್ಸ್ ಮರಣ ಹೊಂದಿಲ್ಲ. ಖಾಸಗಿ ಆಸ್ಪತ್ರೆಗಳ ಸಹಕಾರ ಉತ್ತಮವಾಗಿದ್ದು, ರೋಗಿಗಳಿಗೆ ಉತ್ತಮ ಚಿಕಿತ್ಸೆ ದೊರೆಯುತ್ತಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.
Kshetra Samachara
11/10/2020 06:01 pm