ಉಡುಪಿ: ಜಿಲ್ಲೆ ಕೊರೊನಾ ಸೋಂಕಿತರ ಸಂಖ್ಯೆ ನಿನ್ನೆಗಿಂತ ಕೊಂಚ ಇಳಿಕೆ ಕಂಡಿದೆ. ನಿನ್ನೆ (ಸೋಮವಾರ) 135 ಜನರಿಗೆ ಸೋಂಕು ದೃಢಪಟ್ಟಿತ್ತು. ಇಂದು 104 ಜನರಿಗೆ ಕೊರೊನಾ ದೃಢಪಟ್ಟಿದೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಜಿಲ್ಲೆಯಲ್ಲಿ ಇಂದು 104 ಜನರಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 70,180ಕ್ಕೆ ಏರಿಕೆಯಾಗಿದೆ. ಇಂದು ಸೋಂಕಿನಿಂದ 77 ಜನ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಆ ಮೂಲಕ ಒಟ್ಟು ಡಿಸ್ಚಾರ್ಚ್ ಆದವರ ಸಂಖ್ಯೆ 68,270ಕ್ಕೆ ಏರಿಕೆಯಾಗಿದೆ.
ಇನ್ನು ಸೋಂಕಿನಿಂದ ಒಬ್ಬರು ಸಾವನ್ನಪ್ಪಿದ್ದು, ಈ ಮೂಲಕ ಒಟ್ಟು ಸಾವಿನ ಸಂಖ್ಯೆ 421ಕ್ಕೆ ಏರಿಕೆಯಾಗಿದ್ದು, ಜಿಲ್ಲೆಯಲ್ಲಿ 1,489 ಸಕ್ರಿಯ ಪ್ರಕರಣಗಳಿವೆ.
Kshetra Samachara
03/08/2021 07:04 pm