ಉಡುಪಿ: ಜಿಲ್ಲೆಯಲ್ಲಿ ಇಂದು 122 ಜನರಿಗೆ ಸೋಂಕು ದೃಢಪಟ್ಟಿದ್ದು, 158 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 72,051ಕ್ಕೆ ಏರಿಕೆಯಾಗಿದೆ. ಒಟ್ಟು ಡಿಸ್ಚಾರ್ಚ್ ಆದವರ ಸಂಖ್ಯೆ 70,098ಕ್ಕೆ ಏರಿಕೆಯಾಗಿದೆ. ಇನ್ನು ಸೋಂಕಿನಿಂದ ಇಂದು ಒಬ್ಬರು ಸಾವನ್ನಪ್ಪಿದ್ದು, ಈ ಮೂಲಕ ಒಟ್ಟು ಸಾವಿನ ಸಂಖ್ಯೆ 440ಕ್ಕೆ ಏರಿಕೆಯಾಗಿದ್ದು, ಜಿಲ್ಲೆಯಲ್ಲಿ 1,513 ಸಕ್ರಿಯ ಪ್ರಕರಣಗಳಿವೆ.
Kshetra Samachara
17/08/2021 07:40 pm