ಉಡುಪಿ: ಜಿಲ್ಲೆಯಲ್ಲಿ ಇಂದು 94 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 202 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದೆ.
ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 75,564ಕ್ಕೆ ಏರಿಕೆಯಾಗಿದೆ. ಒಟ್ಟು ಡಿಸ್ಚಾರ್ಚ್ ಆದವರ ಸಂಖ್ಯೆ 73,334ಕ್ಕೆ ಏರಿಕೆಯಾಗಿದೆ. ಇನ್ನು ಸೋಂಕಿನಿಂದ ಇಂದು ಯಾವುದೆ ಸಾವು ಸಂಭವಿಸಿಲ್ಲ. ಈವರೆಗೂ ಒಟ್ಟು ಸಾವಿನ ಸಂಖ್ಯೆ 467ಕ್ಕೆ ಏರಿಕೆಯಾಗಿದ್ದು, ಜಿಲ್ಲೆಯಲ್ಲಿ 1,763 ಸಕ್ರಿಯ ಪ್ರಕರಣಗಳಿವೆ.
Kshetra Samachara
17/09/2021 06:37 pm