ಉಡುಪಿ: ಜಿಲ್ಲೆಯಲ್ಲಿ ಇಂದು 15 ಜನರಿಗೆ ಸೋಂಕು ದೃಢಪಟ್ಟಿದ್ದು, 29 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 76,524ಕ್ಕೆ ಏರಿಕೆಯಾಗಿದೆ. ಒಟ್ಟು ಡಿಸ್ಚಾರ್ಚ್ ಆದವರ ಸಂಖ್ಯೆ 75,865ಕ್ಕೆ ಏರಿಕೆಯಾಗಿದೆ. ಇನ್ನು ಸೋಂಕಿನಿಂದ ಇಂದು ಒಬ್ಬರು ಸಾವನ್ನಪ್ಪಿದ್ದು, ಈವರೆಗೂ ಒಟ್ಟು 483 ಜನರು ಕೊರೊನಾಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ 176 ಸಕ್ರಿಯ ಪ್ರಕರಣಗಳಿವೆ.
Kshetra Samachara
11/10/2021 06:57 pm