ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಂದು ಭಾರೀ ಏರಿಕೆ ಕಂಡಿದ್ದು, ಜಿಲ್ಲೆಯ ಜನರಲ್ಲಿ ಆತಂಕ ಹೆಚ್ಚಿಸಿದೆ. ಎರಡನೇ ಅಲೆಯ ಬಳಿಕ ಮೂರನೇ ಅಲೆಗೆ ಇದೇ ಮೊದಲ ಬಾರಿಗೆ ಉಡುಪಿಯಲ್ಲಿ 340 ಕೊರೋನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. 77 ಮಂದಿ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 78,189ಕ್ಕೆ ಏರಿಕೆಯಾಗಿದೆ. ಒಟ್ಟು ಡಿಸ್ಚಾರ್ಚ್ ಆದವರ ಸಂಖ್ಯೆ 76,719 ಆಗಿದೆ. ಇನ್ನು ಸೋಂಕಿನಿಂದ ಇಂದು ಯಾವುದೇ ಸಾವು ಸಂಭವಿಸಿಲ್ಲ. ಈವರೆಗೂ ಒಟ್ಟು 491 ಜನರು ಕೊರೊನಾಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ979 ಸಕ್ರಿಯ ಪ್ರಕರಣಗಳಿವೆ.
Kshetra Samachara
09/01/2022 07:50 pm