ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಅಬ್ಬರ ಇಂದು ಇಳಿಕೆ ಕಂಡಿದೆ. ನಿನ್ನೆ (ಭಾನುವಾರ) 591 ಜನರಿಗೆ ಕೊರೊನಾ ದೃಢಪಟ್ಟಿತ್ತು. ಇಂದು 442 ಜನರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, 239 ಮಂದಿ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಪ್ರಕಾರ, ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 81,535ಕ್ಕೆ ಏರಿಕೆಯಾಗಿದೆ. ಒಟ್ಟು ಡಿಸ್ಚಾರ್ಚ್ ಆದವರ ಸಂಖ್ಯೆ 77,449 ಆಗಿದೆ. ಇನ್ನು ಸೋಂಕಿನಿಂದ ಇಂದು ಯಾವುದೇ ಸಾವು ಸಂಭವಿಸಿಲ್ಲ. ಈವರೆಗೂ ಒಟ್ಟು 491 ಜನರು ಕೊರೊನಾಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ 3,595 ಸಕ್ರಿಯ ಪ್ರಕರಣಗಳಿವೆ.
Kshetra Samachara
17/01/2022 08:37 pm