ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಅಬ್ಬರ ನಿಧಾನವಾಗಿ ಇಳಿಕೆಯಾಗುತ್ತಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಪ್ರಕಾರ, ಜಿಲ್ಲೆಯಲ್ಲಿ ಇಂದು 21 ಜನರಿಗೆ ಕೊರೊನಾ ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 95,440 ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ ಇಂದು 69 ಜನ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಈ ಮೂಲಕ ಒಟ್ಟು ಡಿಸ್ಚಾರ್ಚ್ ಆದವರ ಸಂಖ್ಯೆ 94,670 ಕ್ಕೆ ಏರಿಕೆಯಾಗಿದೆ.
ಇನ್ನುಈವರೆಗೂ 540 ಜನ ಹೆಮ್ಮಾರಿ ಕೊರೊನಾಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ 230 ಸಕ್ರಿಯ ಪ್ರಕರಣಗಳಿವೆ.
Kshetra Samachara
19/02/2022 08:42 pm